ಸುಂಟಿಕೊಪ್ಪ ಮಾ.9 NEWS DESK : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಮತ್ತು ಸುಂಟಿಕೊಪ್ಪ ಕೊಡವ ಕೂಟದ ಲೋಪಮುದ್ರೆ ಪೊಮ್ಮಕ್ಕಡ ಸಂಘದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕøತರಾದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷ ಬಾಚರಣಿಯಂಡ ರಾಣು ಅಪ್ಪಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಸಮಾಜದ ಅಧ್ಯಕ್ಷರಾದ ಕೇಂದ್ರಿಮಾಡ ಡಾಲಿ ಕರುಂಬಯ್ಯ ಮತ್ತು ಲೋಪಮುದ್ರ ಪೊಮ್ಮಕ್ಕಡ ಸಂಘದ ಮಾಜಿ ಅಧ್ಯಕ್ಷರಾದ ಬೊಳಂದಡ ಸರೋಜಿನಿ ದೇವಯ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಕುರಿತು ವಿಚಾರ ಮಂಡನೆ, ಉಮ್ಮತಾಟ್, ಹಾಸ್ಯಮಂಜರಿ, ವಾಲತ್ತಾಟ್ ಪೈಪೋಟಿ ಸೇರಿದಂತೆ ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹೊರತಂದ ಪುಸ್ತಕಗಳು ಮಾರಾಟ ನಡೆಯಿತು.
ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂಧಿಸಲಾಯತು.







