ಮಡಿಕೇರಿ ಮಾ.10 NEWS DESK : ಕೆದಕಲ್ ನ ಶ್ರೀ ಭದ್ರಕಾಳೇಶ್ವರಿ ದೇವಾಲಯದ ವಾರ್ಷಿಕೋತ್ಸವ ಮಾ.12 ರಂದು ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಕುಂಭಾಭಿಷೇಕ, ಕಳಶ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ 1 ಗಂಟೆಯಿಂದ ಅನ್ನ ಸಂತರ್ಪಣೆಯಾಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.











