Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*
  • *10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*
  • *SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*
  • *ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಡಿಕೇರಿ ವುಡ್ಸ್ ನಿಂದ ಸಂಭ್ರಮದ ಮಹಿಳಾ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಡಿಕೇರಿ ವುಡ್ಸ್ ನಿಂದ ಸಂಭ್ರಮದ ಮಹಿಳಾ ದಿನಾಚರಣೆ*

ಮಾರ್ಚ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.10 NEWS DESK : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಕ್ಲಬ್ ನ ಮಹಿಳಾ ಸದಸ್ಯರಾದ ರೊ.ಪ್ರಮಿಳಾ ಶೆಟ್ಟಿ, ರೊ.ಲೀಲಾವತಿ, ರೊ.ಗೀತಾ ಸೂರ್ಯ, ರೊ.ಶಿಲ್ಪಾ ಸತೀಶ್, ರೊ.ಪದ್ಮಾ ಗಿರಿ ಹಾಗೂ ರೊ.ವಿಶಾಲಾಕ್ಷಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ ನಾವೆಲ್ಲರೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಬೇಕು. ಕೌಟುಂಬಿಕ, ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರೇರೇಪಿಸುವಂತೆ ಕರೆ ನೀಡಿದರು. ಮಹಿಳಾ ಸದಸ್ಯರನ್ನು ಸನ್ಮಾನಿಸಲು ನಮಗೆ ಹೆಮ್ಮೆಯಾಗುತ್ತದೆ. ಕ್ಲಬ್ ಗೆ ಮಹಿಳೆಯರು ಅಪಾರ ಕೊಡುಗೆ ನೀಡಿದ್ದು, ಅವರು ಕ್ಲಬ್ ನ ಶಕ್ತಿಯೂ ಹೌದು ಎಂದರು.
ರೊ.ಪದ್ಮಗಿರಿ ಮಾತನಾಡಿ, ಪುರುಷ ಪ್ರಧಾನವಾಗಿರುವ ಇಂದಿನ ಸಮಾಜದಲ್ಲಿ ಮಹಿಳೆಯರಿಗೂ ಸಮಾನ ಅವಕಾಶ, ಹಕ್ಕುಗಳನ್ನು ನೀಡಿ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಬೇಕು. ವರದಕ್ಷಿಣೆ, ಲೈಂಗಿಕ ಕಿರುಕುಳದಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವಲ್ಲಿ ರೋಟರಿ ಸಂಸ್ಥೆ ಮತ್ತಷ್ಟು ಕೆಲಸಗಳನ್ನು ಮಾಡುವ ಅಗತ್ಯವಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯೆ ರೊ.ಲೀಲಾವತಿ ಮಾತನಾಡಿ ಮಹಿಳಾ ಸಮಾನತೆ ಮನೆಯಿಂದಲೇ ಆರಂಭವಾಗಬೇಕು, ಮಹಿಳೆಯರಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರ ಮೇಲಿನ ದೌರ್ಜನ್ಯ ವಿಶ್ವದಲ್ಲಿ ಕೊನೆಯಾಗಲೇಬೇಕು. ನಮ್ಮನ್ನು ಸನ್ಮಾನಿಸಿದ್ದು ಬಹಳ ಸಂತೋಷವಾಗಿದೆ, ಈ ಪರಂಪರೆ ಮುಂದುವರಿಯಲಿ. ರೋಟರಿ ಕ್ಲಬ್ ನಲ್ಲಿ ಮಹಿಳೆಯರಿಗೆ ಆರಂಭದ ದಿನದಿಂದಲೂ ಅಪಾರ ಗೌರವ ಲಭ್ಯವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೊ.ವಿಶಾಲಾಕ್ಷಿ ಮಾತನಾಡಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶಗಳು ಸಿಗಬೇಕು ಎಂದರು. ರೊ.ಪ್ರಮಿಳಾ ಶೆಟ್ಟಿ ಮಾತನಾಡಿ, ಮಹಿಳೆಯರು ಯಾವುದಕ್ಕೂ ಕಡಿಮೆಯಿಲ್ಲ, ಇಂದು ಯಾವುದೇ ಕ್ಷೇತ್ರದಲ್ಲಿ ನಾವು ಹೋದಾಗ ಮಹಿಳೆಯರನ್ನು ಕಾಣಬಹುದು. ಇದು ಸ್ವಲ್ಪ ಮಟ್ಟಿಗೆ ಸಾಮಾಜಿಕ ಅಸಮತೋಲನವನ್ನು ಹೋಗಲಾಡಿಸಿದೆ. ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂದು ನಿರೂಪಿಸಬೇಕು, ಆ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಹಿರಿಯ ರೋಟರಿ ಸಲಹೆಗಾರ ರೊ.ಬಿ.ಜಿ.ಅನಂತಶಯನ ಅವರು ಮಾತನಾಡಿ ಪ್ರತಿಯೊಬ್ಬ ಮಹಿಳೆ ಸಾಹಿತ್ಯ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ತನ್ನನ್ನು ತಾನು ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ವಿಶೇಷವಾಗಿ ಮಹಿಳಾ ಸದಸ್ಯರಿಗೆ ಗೌರವ ನೀಡುವ ಉದ್ದೇಶದಿಂದ ಸಭೆಯಲ್ಲಿ ರೊ.ಲೀಲಾವತಿಯವರು ಗೌರವ ಅಧ್ಯಕ್ಷರಾಗಿ ಹಾಗೂ ರೊ.ಗೀತಾ ಸೂರ್ಯ ಅವರು ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು. ಮಹಿಳೆಯರಿಂದಲೇ ಕಾರ್ಯಕ್ರಮ ನಡೆದದ್ದು ವಿಶೇಷವಾಗಿತ್ತು. ರೋಟರಿ ವುಡ್ಸ್ ಕಾರ್ಯದರ್ಶಿ ರೊ.ಹರೀಶ್ ಕಿಗ್ಗಾಲ್ ವಂದಿಸಿದರು. ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 2026

*SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.23 NEWS DESK : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5,742…

*SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*

ಏಪ್ರಿಲ್ 23, 2026

*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*

ಏಪ್ರಿಲ್ 23, 2026

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.