ಮಡಿಕೇರಿ ಮಾ.10 NEWS DESK : ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ಮಾದಕ ದ್ರವ್ಯ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯು ರಾಜ್ಯಾದ್ಯಂತ “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ “ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಣಿಕೆ ತಡೆಗಟ್ಟುವ ಕುರಿತು ಜನ ಜಾಗೃತಿ” ಮೂಡಿಸುವ ಸಲುವಾಗಿ ಈ ದಿನ ಕುಶಾಲನಗರದ ಪ್ರಮುಖ ರಸ್ತೆಗಳಲ್ಲಿ Walkathon (Walking marathon) ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಪತ್ರಿಕೆ, ಮಾದ್ಯಮ, ವಿವಿಧ ಸಾರ್ವಜನಿಕ ಸಂಘ ಸಂಸ್ಥೆಗಳ ಪ್ರಮುಖರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಾಗೂ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.











