ನಾಪೋಕ್ಲು ಮಾ.11 NEWS DESK : ಹೊದ್ದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಭಗವತಿ ದೇವಾಲಯದಲ್ಲಿ ಬ್ರಹ್ಮ ಕಳಶೋತ್ಸವದ ಅಂಗವಾಗಿ ಶ್ರದ್ಧಾಭಕ್ತಿಯಿಂದ ನಾಗಪ್ರತಿಷ್ಠೆ ಜರುಗಿತು.
ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು, ಮಾ7.ರಂದು ಕುತ್ತಿ ಪೂಜೆಯೊಂದಿಗೆ ಕಳಶೋತ್ಸವ ಆರಂಭಗೊಂಡಿತು.ಮಾ.8 ರಂದು ತಂತ್ರಿಯವರು ಆಗಮಿಸಿ, ವಾಸ್ತು ಕಳಶ ಪೂಜೆ, ವಾಸ್ತು ಬಲಿ ನೆರವೇರಿಸಿದರು. ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾ ಆರಾಧನೆ ನಡೆಯಿತು.
ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳ ಹಾಗೂ ದೇವಸ್ಥಾನದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ , ಭಕ್ತರ ಸಮ್ಮುಖದಲ್ಲಿ ನಾಗಪ್ರತಿಷ್ಠೆ ಜರುಗಿತು.
ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ಇಂದು ಮುಂಜಾನೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ.ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ನಿವೃತ್ತ ಶಿಕ್ಷಕ ಚೌರಿರ ಉದಯ ಸೇರಿದ0ತೆ ಸಮಿತಿಯ ನಿರ್ದೇಶಕ ಸದಸ್ಯರು, ಊರಿನ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಮಾ.12 ರಂದು ಸಂಜೆ 4 ಗೆ ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ಜರುಗಲಿವೆ. ಮಾ.13 ರಂದು ಬೆಳಗ್ಗೆ 8 ಗಂಟೆಯಿಂದ 10 ಗಂಟೆ ಒಳಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ, ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.14 ರಂದು ಸಂಜೆ ಮೂರು ಗಂಟೆಗೆ ದೇವರ ನೃತ್ಯಬಲಿ ಜರುಗಲಿದೆ.
ವರದಿ : ದುಗ್ಗಳ ಸದಾನಂದ








