ನಾಪೋಕ್ಲು ಮಾ.11 NEWS DESK : 2022-23ನೇ ಸಾಲಿನಲ್ಲಿ ಕೈಗೊಂಡ ಸಾಕ್ಷರತಾ ಕಾರ್ಯಕ್ರಮದಡಿಯಲ್ಲಿ ಪರೀಕ್ಷೆ ಬರೆದ ಸಾಕ್ಷರರು ಎಂದು ಗುರುತಿಸಲಾದ ಮಡಿಕೇರಿ ತಾಲ್ಲೂಕು ಮಟ್ಟದ ನವ ಸಾಕ್ಷರರಿಗೆ ಸಾಕ್ಷರತಾ ಪ್ರಮಾಣ ಪತ್ರ ವಿತರಿಸಲಾಯಿತು.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ನವಸಾಕ್ಷರರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿ ಬಿಆರ್ ಪಿ ಮಂಜುಳಾ ಚಿತ್ರಾಪುರ, ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಮೇಕೇರಿ ಕ್ಲಸ್ಟರ್ ನ ಸಿಆರ್ ಪಿ ಕಲ್ಪನಾ, ಆಶಾಕಾರ್ಯಕರ್ತೆಯರು, ಭೋಧಕರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.








