ಮಡಿಕೇರಿ ಮಾ.11 NEWS DESK: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಎಂ.ಖಲೀಲ್ ಹಾಗೂ ಬಿ.ಹೆಚ್.ಮುಸ್ತಫ ತಿತಿಮತಿ ಆಯ್ಕೆಯಾಗಿದ್ದಾರೆ.
ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಆರ್.ಜೋಸ್ ಮಟ್ಟಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









