ಮಡಿಕೇರಿ ಮಾ.12 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಸರ್ಕಾರದ ಪ್ರಮುಖ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ‘ಕಲಾಜಾಥ ಸಂಚಾರಿ ವಾಹನ ಮೂಲಕ ಪ್ರದರ್ಶನ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಲಾಜಾಥ ಸಂಚಾರಿ ವಾಹನದ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ಕಲಾಜಾಥ ಸಂಚಾರಿ ವಾಹನದ ಮೂಲಕ ಸರ್ಕಾರದ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ಗ್ಯಾರಂಟಿ ಯೋಜನೆಗಳ ಹಾಡು ಹಾಡಿ ಗಮನ ಸೆಳೆದರು.








