ಮಡಿಕೇರಿ ಮಾ.12 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದಾವಣಗೆರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಂಘಟಕಿ ಯು.ಸಿ.ದಮಯಂತಿ ಹಾಗೂ ಪೊನ್ನಂಪೇಟೆ ಸಂಸ್ಥೆಯ ಕಾರ್ಯದರ್ಶಿ ವಾಮನ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುದೀರ್ಘ ಕಾಲದ ಇವರ ಉತ್ತಮ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮಾಥ್ಯು ತಿಳಿಸಿದ್ದಾರೆ.










