ನಾಪೋಕ್ಲು ಮಾ.12 NEWS DESK : ಹೊದ್ದೂರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಭಗವತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ದೇವಾಲಯದಲ್ಲಿ ಆಶ್ಲೇಷ ಬಲಿ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು.
ದೇವಾಲಯ 1.5 ಕೋಟಿ ರೂ ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು, ವಾಸ್ತುಪೂಜೆ, ಕಳಸ ಪೂಜೆ, ವಾಸ್ತು ಬಲಿ, ಅಂಕುರ ಆರೋಹಣ, ವಿಗ್ರಹ ಪರಿಗ್ರಹ, ದೀಪಾರಾಧನೆ ನಡೆಯಿತು. ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು.
ಸೋಮವಾರ ಬೆಳಿಗ್ಗೆ ಗಣಪತಿ ಹೋಮ, ಸಂಜೆ ಅನುಜ್ಞಾ ಬಲಿ ಹಾಗೂ ಅನುಜ್ಞಾ ಪ್ರಾರ್ಥನೆ ಗ್ರಾಮಸ್ಥರಿಂದ ಜರುಗಿತು.
ಇಂದು ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು.
ಬ್ರಹ್ಮಶ್ರೀ ಕೆ.ಯು ಪದ್ಮನಾಭ ತಂತ್ರಿಗಳು ಮತ್ತು ಬಳಗ, ದೇವಾಲಯದ ಮುಖ್ಯ ಅರ್ಚಕ ಶ್ರೀಕಾಂತ್ , ದೇವಸ್ಥಾನದ ತಕ್ಕ ಮುಖ್ಯಸ್ಥರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ.ಮೇದಪ್ಪ , ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ಚೌರಿರ ಉದಯ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.








