ಮಡಿಕೇರಿ ಮಾ.12 NEWS DESK : ಮಡಿಕೇರಿ ತಾಲೂಕಿನ ಮದೆ ಗ್ರಾ.ಪಂ ವ್ಯಾಪ್ತಿಯ ಬೆಳಕುಮಾನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.
ಸುವರ್ಣ ಮಹೋತ್ಸವ ಸಮಿತಿ ಸದಸ್ಯರ ಕೋರಿಕೆ ಮೇರೆಗೆ ಮದೆಮಾದೂರಪ್ಪ ದೇವರ ಉತ್ಸವಕ್ಕೆ ಆಗಮಿಸಿದ್ದ ಎ.ಎಸ್.ಪೊನ್ನಣ್ಣ ಅವರು ಬೆಳಕುಮಾನಿ ಶಾಲೆಗೆ ತೆರಳಿ ಸುವರ್ಣ ಮಹೋತ್ಸವ ದ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಭಾಗ್ಯಲಕ್ಷ್ಮಿ ಉತ್ಸವದ ತಯಾರಿ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸ್ಥಳೀಯ ಮುಖಂಡ ಕೊಲ್ಯದ ಗಿರೀಶ್, ಗ್ರಾ.ಪಂ ಉಪಾಧ್ಯಕ್ಷರಾದ ಬೈನೆರವನ ಯಶೋಧಿನಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಗ್ರಾ.ಪಂ ಸದಸ್ಯರಾದ ಬಿ.ಸಿ.ಸಜನ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೂರಜ್ ಹೊಸೂರು, ಶಾಸಕರ ವಿಶೇಷ ಕರ್ತವ್ಯ ಅಧಿಕಾರಿ ಮುತ್ತಣ್ಣ ಸೇರಿದಂತೆ ಪ್ರಮುಖರು ಹಾಜರಿದ್ದರು.






