ಮಡಿಕೇರಿ ಮಾ.13 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಸಂಸದ ಪ್ರತಾಪ್ ಸಿಂಹರಿಗೆ ಇದೀಗ ಅಭಿಮಾನಿಗಳ ಬೆಂಬಲ ದೊರೆತ್ತಿದೆ. ತಮ್ಮ ನಾಯಕ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಲೇಬೇಕೆಂದು ಅಭಿಮಾನಿಗಳು ಮೈಸೂರಿನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ, ಪ್ರತಾಪ್ ಸಿಂಹ ಬೇಕೇ ಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದಾರೆ. ಕಳೆದ 10 ವರ್ಷಗಳ ಕಾಲ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರೂ ಟಿಕೆಟ್ ನೀಡದೆ ಇರಲು ಕಾರಣ ಏನು ಎಂದು ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಾಪ್ ಸಿಂಹ ಪರ ಇಂದು ಬೆಂಬಲಿಗರು ಸಾಲು ಸಾಲು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.









