ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳನ್ನು ಬಲಪಡಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮಾ.15 ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಕಾವೇರಿ ಹಾಲ್ ನಲ್ಲಿ ಸಮಾವೇಶ ನಡೆಯಲಿದ್ದು, ಇದಕ್ಕೂ ಮೊದಲು ಖಾಸಗಿ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಸಾಗಲಿದೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಎಂ.ಪಿ.ಸುನಿಲ್ ಸುಬ್ರಮಣಿ, ಎಸ್.ಜಿ.ಮೇದಪ್ಪ, ಪಕ್ಷದ ಮಾಜಿ ಜಿಲ್ಲಾಧ್ಯಕ್ಷರುಗಳಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ಹಿಂದುಳಿದ ವರ್ಗಗಳ ಜಿಲ್ಲಾ ಉಸ್ತುವಾರಿ ವಿಠಲ್ ಪೂಜಾರಿ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.









