ಮಡಿಕೇರಿ ಮಾ.13 NEWS DESK : ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಜಿಲ್ಲಾಡಳಿತ ಭವನದ ಮುಂದೆ ಕಟ್ಟಿರುವ ತಡೆಗೋಡೆ ಸಂಬಂಧ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.









