ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಥಾಸ್ಪರ್ಧೆ ಕಾರ್ಯಕ್ರಮವು ಮಡಿಕೇರಿ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಥೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು 3 ಮಂದಿ ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವೈಷ್ಣವಿ ಡಿ.ಪಿ.(ಪ್ರಥಮ), ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಮೇಘ ಶ್ರೀ ಕೆ.(ದ್ವಿತೀಯ) ಹಾಗೂ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೋನಿಷಾ(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.
ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಮುತ್ತಪ್ಪ ದೇವಾಲಯದ ಬಳಿ ಇರುವ ಸಹಕಾರಿ ತರಬೇತಿ ಕೇಂದ್ರದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.









