ಮಡಿಕೇರಿ ಮಾ.13 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಅಜಬಾನು (37) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸ್ಥಳಿಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ತೀವ್ರವಾಗಿ ಗಾಯಗೊಂಡ ಅಜಬಾನು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಘಟನೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗೂ ಕಾರ್ಮಿಕರು ಅರಣ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ಮುಗ್ಧ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು.
Breaking News
- *ಚನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
- *ಕೂಡಿಗೆ ಡಯಟ್ ಗೆ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿದ ಬಿ.ಎನ್.ಪುಷ್ಪ*
- *ಇತಿಹಾಸ ಪ್ರಸಿದ್ಧ ಪಾಲಿಬೆಟ್ಟ ಉರೂಸ್ ಗೆ ಚಾಲನೆ*
- *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*