ಬೆಂಗಳೂರು ಮಾ.14 NEWS DESK : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಯದುವೀರ್ ಅವರನ್ನು ಸ್ವಾಗತಿಸಿದರು. ಬಳಿಕ ಯದುವೀರ್ ಒಡೆಯರ್ ಅವರು ಭಾರತಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪ್ರೀತಂ ಗೌಡ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಸಚಿವರಾದ ಸಿ.ಟಿ.ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.










