ಮಡಿಕೇರಿ ಮಾ.14 NEWS DESK : ಇತ್ತೀಚೆಗೆ ಮಡಿಕೇರಿ ಸಮೀಪ ತಾಳತ್ತಮನೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೈಕ್ ಚಾಲಕ ಕಾಟಕೇರಿಯ ಚರಣ್ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳ ಅಗತ್ಯವಿದ್ದು, ಬಡ ಕುಟುಂಬ ಇದನ್ನು ಭರಿಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಯಲ್ಲಿದೆ. ಮಡಿಕೇರಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚರಣ್ ಈಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ದಾನಿಗಳು ಆರ್ಥಿಕ ಸಹಕಾರವನ್ನು ನೀಡುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.










