ನಾಪೋಕ್ಲುಮಾ.14 NEWS DESK : ಕೊಡಗಿನ ಆರಾಧ್ಯ ದೈವ ಪಾಡಿ ಇಗ್ಗುತ್ತಪ್ಪ ದೇವಾಲಯದ ರಸ್ತೆ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲನೆ ನಡೆಸಿದರು.
ಸಂಪೂರ್ಣ ಹಾನಿಯಾಗಿದ್ದ ರಸ್ತೆಯ ಕಾಮಗಾರಿ ನಡೆಸಲು ಜನರ ಕೋರಿಕೆ ಮೇರೆಗೆ ಕೆಲವು ದಿನಗಳ ಹಿಂದೆ ಎ.ಎಸ್.ಪೊನ್ನಣ್ಣ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿಯ ಗುಣಮಟ್ಟವನ್ನು ಶಾಸಕರು ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮಾ.23ರಂದು ಕಲ್ಲಡ್ಚ ಹಬ್ಬ ನಡೆಯಲಿದೆ .ಅದರೊಳಗೆ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿ ಮಾ. 22ರಂದು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ,ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿ.ಸಿ.ಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಕರ್ತಂಡ ಶೈಲಾ ಕೊಟ್ಟಪ್ಪ, ಸಾಬು, ಶುಭಾಷ್ ಇನ್ನಿತರರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.








