Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಸೈನಿಕ ಶಾಲೆಗೆ ಮೇಜರ್ ಜನರಲ್ ಸಂಜೀವ್ ಡೋಗ್ರಾ ಭೇಟಿ : ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕರೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕೂಡಿಗೆ ಸೈನಿಕ ಶಾಲೆಗೆ ಮೇಜರ್ ಜನರಲ್ ಸಂಜೀವ್ ಡೋಗ್ರಾ ಭೇಟಿ : ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕರೆ*

ಮಾರ್ಚ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.16 NEWS DESK : ಶಾಲೆಯಲ್ಲಿನ ಅತ್ಯಾಧುನಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕೆಡೆಟ್‌ಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಆಕಾಂಕ್ಷೆಗಳನ್ನು ಉತ್ಸಾಹದಿಂದ ಮುಂದುವರಿಸಿ, ಆದರ್ಶ ನಾಗರೀಕರಾಗಬೇಕು ಎಂದು ಪುಣೆಯ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಖಡಕ್ವಾಸ್ಲಾ, ಮೇಜರ್ ಜನರಲ್ ಸಂಜೀವ್ ಡೋಗ್ರಾ ಹೇಳಿದರು.

ಕೊಡಗು ಜಿಲ್ಲೆಯ ಕೂಡಿಗೆ ಸೈನಿಕ ಶಾಲೆಗೆ ವಿಶೇಷ ಅತಿಥಿಯಾಗಿ ಆಗಮಿಸಿ ಶಾಲೆಯ ವಿದ್ಯಾರ್ಥಿಗಳೊಂದಿಗೆ  ಪ್ರೇರಣಾತ್ಮಕ ಸಂವಾದದಲ್ಲಿ ಮಾತನಾಡಿದ ಅವರು ಸಮಾಜದ ಆದರ್ಶ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಾಲೆಯ ತರಬೇತಿ ಹಾಗೂ ಸೌಲಭ್ಯಗಳ  ವ್ಯವಸ್ಥೆಯನ್ನು ಶ್ಲಾಘಿಸಿದರು.  ಕೇಂದ್ರ ಲೋಕಸೇವಾ ಆಯೋಗದ ಎನ್‌ ಡಿ ಎ ಪರೀಕ್ಷೆ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳಿಗೆ ಶಿಸ್ತುಬದ್ಧ ತಯಾರಿ ಮಾಡುವ ಕುರಿತು ಅವರು ಅಮೂಲ್ಯವಾದ ಮಾರ್ಗದರ್ಶನವನ್ನು ನೀಡಿದರು. ಇಂತಹ ಸ್ಪರ್ಧಾತ್ಮಕ ಪ್ರಯತ್ನಗಳಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ, ದೃಢಸಂಕಲ್ಪ, ತೆರೆದ ಮನಸ್ಸು ಮತ್ತು ಸಾಂಘಿಕ ಕಾರ್ಯಗಳ ಪ್ರಾಮುಖ್ಯತೆ ಇದೆ ಎಂದರು.  ಈ ಸಂವಾದವು ಮಕ್ಕಳ ಆಲೋಚನಾ ವಿಶ್ಲೇಷಣೆ ಮತ್ತು ಸ್ಪೂರ್ತಿದಾಯಕ ಪ್ರೇರಣೆಗೆ ಹೆಸರಾಯಿತು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿ ಕೆಡೆಟ್ ಸರ್ವೇಶ್ ಅವರು ಅತಿಥಿಗಳಿಗೆ ಸ್ವಾಗತ ಕೋರಿದರು. ಹಾಗೆಯೇ ಮುಖ್ಯ ಅತಿಥಿಗಳ ಕಿರು ಪರಿಚಯ ಮಾಡಿ, ಮೇಜರ್ ಜನರಲ್ ಸಂಜೀವ್ ಡೋಗ್ರಾ ಅವರ ವೃತ್ತಿಪರ ಸಾಧನೆಗಳ ಮೇಲೆ ಬೆಳಕು ಚೆಲ್ಲಿದರು ಮತ್ತು ಅವರ ಆರಂಭಿಕ ತರಬೇತಿ ದಿನಗಳಿಂದ ಹಿಡಿದು  ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿ ಎ)ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾಗಿ ನೇಮಕವಾಗುವವರೆಗಿನ ಎಲ್ಲಾ ಸಾಧನೆಗಳ ವಿವರ ನೀಡಿದರು. ಕೆಡೆಟ್ ಸರ್ವೇಶ್ ರವರು ಮುಖ್ಯ ಅತಿಥಿಯ ಪರಿಚಯದಲ್ಲಿ ಪುಣೆಯ ಖಡಕ್ವಾಸ್ಲಾದಲ್ಲಿರುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪೋರ್ಟಲ್‌ಗೆ ಅಧಿಕಾರಿಯ ಪ್ರವೇಶವನ್ನು ಒಳಗೊಂಡಂತೆ,  ಅಧಿಕಾರಿಯ ಸುಪ್ರಸಿದ್ಧ ವೃತ್ತಿಜೀವನದ ವಿವಿಧ ಮಜಲುಗಳನ್ನು ಪರಿಚಯಿಸಿದರು. ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜ್, ವೆಲ್ಲಿಂಗ್ಟನ್ ಮತ್ತು ಕಾಲೇಜ್ ಆಫ್ ಡಿಫೆನ್ಸ್ ಮ್ಯಾನೇಜ್‌ಮೆಂಟ್, ಸಿಕಂದರಾಬಾದ್ ನಲ್ಲಿ ಸಲ್ಲಿಸಿದ ಸೇವೆಯು ಯುದ್ಧ ಅನುಭವವನ್ನು ಎದುರಿಸಲು ಮತ್ತು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್ ಸೇರಿದಂತೆ ಬಹುತೇಕ ಎಲ್ಲಾ ಕಠಿಣ ಭೂಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವಿಶೇಷ ಅನುಭವ ನೀಡಿತು. ನಂತರ ಜನರಲ್ ಆಫೀಸರ್‌ನಂತಹ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಶ್ರೀಯುತರು ಮೌಂಟೇನ್ ವಿಭಾಗದ ಕಮಾಂಡಿಂಗ್, ಇನ್‌ಫೆಂಟ್ರಿ ಸ್ಕೂಲ್‌ನಲ್ಲಿ ಡೆಪ್ಯೂಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾದರು. ನಂತರ ವಾರ್ ಗೇಮಿಂಗ್ ಡೆವಲಪ್‌ಮೆಂಟ್ ಸೆಂಟರ್‌ನ ಕಮಾಂಡೆಂಟ್ ಹಾಗೂ ಪ್ರಸ್ತುತ ಖಡಕ್ವಾಸ್ಲಾದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(ಎನ್ ಡಿ ಎ)ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

[ಪ್ರಸ್ತುತ ಸಂವಾದವು ವಿದ್ಯಾರ್ಥಿಗಳಿಗೆ ರಕ್ಷಣಾ ಪಡೆಗಳಲ್ಲಿ ವೃತ್ತಿಜೀವನವನ್ನು ಹೊಂದುವ ಅಂತದೃಷ್ಠಿಗಳಿಸಲು ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ದಕ್ಷ ರಕ್ಷಣಾ ಅಧಿಕಾರಿಯಾಗಲು ಹೊಂದಬೇಕಾದ ಅಗತ್ಯ ಗುಣಗಳ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಟ್ಟಿತು. ]

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಎನ್‌ ಡಿ ಎ ಯಲ್ಲಿನ ದೈನಂದಿನ ತರಬೇತಿ, ಜೀವನ ಶೈಲಿ, ಶಿಸ್ತು ಹಾಗೂ ಅಕಾಡೆಮಿಯು ವಿದ್ಯಾರ್ಥಿಗಳಿಂದ ಏನನ್ನು ನಿರೀಕ್ಷಿಸುತ್ತದೆ ಎಂದು ಮುಖ್ಯ ಅತಿಥಿಗಳಿಗೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಕೊಡಗಿನ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಮುಖ್ಯ ಅತಿಥಿಗಳಿಗೆ ಶಾಲೆಯ ಪರವಾಗಿ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಸೌಹಾರ್ಧಯುತ ಭೇಟಿಯ ದ್ಯೋತಕದ ಸಂಕೇತವಾಗಿ  ಮುಖ್ಯ ಅತಿಥಿಗಳಿಗೆ ಶಾಲೆಯ ಯುದ್ಧ ವೀರರ ಸ್ಮಾರಕದ  ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಮೇಜರ್ ಜನರಲ್ ಸಂಜೀವ್ ಡೋಗ್ರಾ ಅವರ ಭೇಟಿಯು ಸೈನಿಕ ಶಾಲೆ ಕೊಡಗಿನ ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕವಾಗಿದ್ದು, ನೂತನ ಅನುಭವವನ್ನು ನೀಡಿತು. ಇದರೊಂದಿಗೆ ವಿದ್ಯಾರ್ಥಿಗಳು ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಿದ ನಂತರ ವೃತ್ತಿ ಜೀವನದಲ್ಲಿ ಉತ್ಕೃಷ್ಟತೆಯೊಂದಿಗೆ ಮುಂದುವರಿಯಲು ಅವರನ್ನು ಪ್ರೇರೇಪಿಸಿತು. ಪ್ರಸ್ತುತ ಸಂವಾದ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಹಾಗೂ ಸಿಬ್ಬಂದಿಗಳು  ಉಪಸ್ಥಿತರಿದ್ದರು. (ವರದಿ : ಅಶ್ವಥ್ ಕುಮಾರ್ ಎನ್.ಎ)     

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.