Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶರಣ ಸಂಸ್ಕೃತಿ ವಿಚಾರ ಸಂಕಿರಣ  : ಹನ್ನೆರಡನೇ ಶತಮಾನದ ಭಕ್ತಿಕುಂಡದ ತೀರ್ಥೋದ್ಭವ : ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ*
ಇತ್ತೀಚಿನ ಸುದ್ದಿಗಳು

*ಶರಣ ಸಂಸ್ಕೃತಿ ವಿಚಾರ ಸಂಕಿರಣ  : ಹನ್ನೆರಡನೇ ಶತಮಾನದ ಭಕ್ತಿಕುಂಡದ ತೀರ್ಥೋದ್ಭವ : ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ*

March 16, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, ಮಾ.16 NEWS DESK : ಹನ್ನೆರಡನೇ ಶತಮಾನದಲ್ಲಿ ಭಕ್ತಿ ಭಂಡಾರಿ ಬಸವಣ್ಣನ ನೇತೃತ್ವದಲ್ಲಿ ನಡೆದ ಶರಣ ಸಂಸ್ಕೃತಿ ಅದೊಂದು ಜನಸಮುದಾಯದ ಭಕ್ತಿಯ ತೀರ್ಥೋದ್ಭವ. ಮಾನವ ಕಲ್ಯಾಣದ ಆತ್ಮೋನ್ನತಿಯ ಮಹೋತ್ಸವ ಎಂದು ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ ಹೇಳಿದರು.

ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ “ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಮಡಿಕೇರಿ ಮಹದೇವಪೇಟೆಯ ಮುರುಗೇಶ್ ಹಾಗೂ ಶಿವಮ್ಮ ಅವರು ಸ್ಥಾಪಿಸಿರುವ ಶೀಲವಂತ ಹಾಗೂ ಸಿದ್ದಲಿಂಗಪ್ರಸಾದ್ ದತ್ತಿ ಕಾರ್ಯಕ್ರಮ ಶರಣ ಸಂಸ್ಕೃತಿ ” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, 900 ವರ್ಷಗಳ ವರ್ತಮಾನದ ಅಂದಿನ ಶರಣರು ಕಟ್ಟಿದ ಹಾಗೂ ಸೃಷ್ಟಿಸಿದ ವಚನಗಳು ಎಲ್ಲಾ ಕಾಲಕ್ಕೂ ಅನ್ವಯವಾಗಿ ಇಂದಿನ ಆಧುನಿಕ ಕಾಲಘಟ್ಟದಲ್ಲಿಯೂ ಪ್ರಸ್ತುತತೆಯನ್ನು ಭಿತ್ತರಿಸುತ್ತಿವೆ ಎಂದು ವಿಶ್ಲೇಷಿಸಿದರು.
ಹನ್ನೆರಡನೇ ಶತಮಾನದಲ್ಲಿ ಧರ್ಮದ ಹೆಸರಿನಲ್ಲಿ ಮಾನವೀಯ ಮೌಲ್ಯಗಳು ಮಣ್ಣುಪಾಲಾಗುತ್ತಿದ್ದ ಮತಿ ಹೀನ ಗತಿಯನ್ನು ಗಮನಿಸಿ ನಡೆ – ನುಡಿ, ಶುದ್ಧವಾದ ಸರ್ವಸಮಾನತೆಯ ವೈಚಾರಿಕ ಸಮಾಜವನ್ನು ನಿರ್ಮಿಸಿದ್ದರ ಫಲವೇ ಬಸವಣ್ಣ ಸಾಂಸ್ಕ್ರತಿಕ ನಾಯಕನಾಗಿ ವಿಶ್ವಖ್ಯಾತಿಯಾಗಿದ್ದಾನೆ ಎಂದು ಹರ್ಷವರ್ಧನ ಬಣ್ಣಿಸಿದರು.
ಹಿಂದುಳಿದ ವರ್ಗಗಳ ಇಲಾಖೆಯ ಮಡಿಕೇರಿ ತಾಲ್ಲೂಕು ಅಧಿಕಾರಿ ಬಿಂದಿಯಾ ನಾಯಕ್ ಮಾತನಾಡಿ, ಮನುಷ್ಯರಾಡುವ ಮಾತು ಸತ್ಯ, ಸರಳ, ಸುಂದರವಾದಲ್ಲಿ ಸಮಾಜದಲ್ಲಿ ಯಾವುದೇ ಕಲಹಗಳಿಗೆ ಆಸ್ಪದವೇ ಇರುವುದಿಲ್ಲ.
ಸಮಸ್ತ ಜೀವಿಗಳು ಸೇರಿದಂತೆ ಮನುಷ್ಯನ ಹುಟ್ಟಿಗೆ ಕಾರಣವಾದ ತಾಯಂದಿರ ಮುಟ್ಟನ್ನು ಹೀಗಳೆದು ಮಹಿಳೆಯರನ್ನು ಅವಮಾನಿಸಿ ಅಪಮಾನಿಸಿ ಮಹಿಳಾ ಹಕ್ಕುಗಳನ್ನು ಕಸಿದಿದ್ದ ಹನ್ನೆರಡನೇ ಶತಮಾನದ ವೈದಿಕ ಶಾಹಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಬಸವಣ್ಣ ಅಂದೇ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನುಭಾವ ಎಂದರು.
ಗಾಳಿಬೀಡು ನವೋದಯ ವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಮಾರುತಿ ದಾಸಣ್ಣನವರ್ ” ಶರಣ ಸಂಸ್ಕ್ರತಿ ” ಯ ಬಗ್ಗೆ ಪ್ರವಚನ ನೀಡಿ, ಹನ್ನೆರಡನೇ ಶತಮಾನದಲ್ಲಿ ವಿಶ್ವಕ್ಕೆ ಕರ್ನಾಟಕ ಕೊಡುಗೆಯಾಗಿ ಕೊಟ್ಟ ಶರಣ ಸಂಸ್ಕೃತಿ ಅದ್ಭುತ ಪರಿಕಲ್ಪನೆ. ಈ ಶರಣ ಸಂಸ್ಕ್ರತಿಯ ಮತ್ತೊಂದು ಪರಿಕಲ್ಪನೆಯಾದ ಮಹಾಮನೆಯಲ್ಲಿ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಡಿವಾಳ ಮಾಚಿದೇವ, ನುಲಿಯ ಚೆನ್ನಯ್ಯ, ಛಲಗಾರ ಹರಳಯ್ಯ, ಅಕ್ಕಮಹಾದೇವಿ, ಬಸವಣ್ಣ, ಅಲ್ಲಮ ಹೀಗೆ ನೂರಾರು ಮಂದಿ ಬೇರೆ ಬೇರೆ ಸ್ತರ ಸಮುದಾಯದ ಶರಣರು ಸಮ ಸಮಾಜ ನಿರ್ಮಾಣಕ್ಕೆ ನೀಡಿದ ಕೊಡುಗೆ ಕಾಲಾತೀತವಾದುದು ಎಂದು ದಾಸಣ್ಣನವರ್ ವಿಶ್ಲೇಷಿಸಿದರು.
ಸಂಸ್ಕೃತ ಭಾಷೆಯಲ್ಲಿನ ಸಾಹಿತ್ಯವನ್ನು ಸಾಮಾನ್ಯ ವ್ಯಕ್ತಿಗೂ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಬರೆದು ಸಾರಿದ ಸತ್ಯ ಶುದ್ಧ ಕಾಯಕ ಜೀವಿಗಳ ಆದರ್ಶ ಇಂದಿನ ಮಕ್ಕಳಿಗೆ ಪ್ರೇರಣೆಯಾಗಬೇಕೆಂದು ಕರೆ ಕೊಟ್ಟರು.
ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮೋಹನಕುಮಾರ್, ವಸತಿ ನಿಲಯದ ಮೇಲ್ವಿಚಾರಕಿ ಕರುಣಾಕ್ಷಿ ಇದ್ದರು. ವಿದ್ಯಾರ್ಥಿನಿಯರಾದ ವಿಸ್ಮಯ ನಿರೂಪಿಸಿದರು. ನಿಶ್ಯ-ಪುಷ್ಯ ಸ್ವಾಗತಿಸಿದರು. ಪ್ರಣುತ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಸತಿ ಶಾಲೆ : ಮಾ.31 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ*
Next Article *ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಪದವಿ ಪ್ರದಾನ ಹಾಗೂ ಬೀಳ್ಕೊಡುಗೆ ಸಮಾರಂಭ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.