ಬೆಂಗಳೂರು, ಮಾ.16 NEWS DESK : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*