ಮಡಿಕೇರಿ ಮಾ.16 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳುಗಳಲ್ಲಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದ್ದು, ಸುಮಾರು 140 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸುವ ಮೂಲಕ ಶಾಸಕ ಡಾ.ಮಂತರ್ ಗೌಡ ಅವರು ಜನಸ್ನೇಹಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಪರ ಆಡಳಿತದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕರು ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆಯಾಗಿದೆ, ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿಲ್ಲ, ಈ ಕುರಿತು ಚರ್ಚೆಗೆ ನಾವು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.
ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗಳಿಗೆ ಈಗ ಅಭಿವೃದ್ಧಿ ಭಾಗ್ಯ ದೊರೆತ್ತಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ದೊರೆಯಲಿದ್ದು, ಮಡಿಕೇರಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಲಿದೆ. ಮಡಿಕೇರಿ ಬ್ಲಾಕ್‌ನಲ್ಲಿ ಕೆ.ನಿಡುಗಣೆ, ಗಾಳಿಬೀಡು, ಮಕ್ಕಂದೂರು, ಕಡಗದಾಳು, ಮರಗೋಡು, ಹೊಸ್ಕೇರಿ, ಮೂರ್ನಾಡು, ಹೊದವಾಡ ಮತ್ತು ಮಡಿಕೇರಿ ನಗರಸಭೆಗೆ ಒಳಪಟ್ಟ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗೆ ಒಟ್ಟು 1,40 ಕೋಟಿ ರೂ. ಅನುದಾನ ಬಿಡುಗಡೆಗೊಂಡು ಶಂಕುಸ್ಥಾಪನೆಯಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೇಲ್ ಕಟ್ಟಡ, ಕೆಪಿಟಿಸಿಎಲ್ ಮಡಿಕೇರಿ ಮೂರ್ನಾಡು ಮತ್ತು ಸೋಮವಾರಪೇಟೆ, ಮಾದಾಪುರ, ಜಂಬೂರು ಗ್ರಾಮಗಳಲ್ಲಿ 66/11 ವಿದ್ಯುತ್ ಉಪಕೇಂದ್ರ, ಇಂದಿರಾ ಕ್ಯಾಂಟಿನ್ ಸೇರಿದಂತೆ ವಿವಿಧ ಕಾಮಗಾರಿಗಳು ಆರಂಭಗೊ0ಡಿವೆ ಎಂದು ಹಂಸ ತಿಳಿಸಿದರು.
ಡಿಸಿಸಿ ಸದಸ್ಯ ಜಾನ್ಸನ್ ಪಿಂಟೋ ಮಾತನಾಡಿ, ಉತ್ಸಾಹಿ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು ಶ್ರಮಪಟ್ಟು ಮಡಿಕೇರಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿದ್ದು, ಕಿರಿಹೊಳೆ ಸೇತುವೆಗೆ 15 ರಿಂದ 20 ಕೋಟಿ ಅನುದಾನ ತರಲು ಶ್ರಮ ವಹಿಸಿದ್ದಾರೆ. ಅಲ್ಲದೇ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಿದ್ದಾರೆ. ಶಾಲೆಗಳ ಅಭಿವೃದ್ಧಿ, ಮರಗೋಡು, ಗಾಳಿಬೀಡು, ಕಡಗದಾಳು ವಲಯಗಳಿಗೆ ಹೆಚ್ಚಿನ ಅನುದಾನ ನೀಡಿ ಕಾಮಗಾರಿಗೆ ಚಾಲನೆ ನೀಡಿ, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಜನರಿಗೆ ಸೂಕ್ತ ಸ್ಪಂದನೆ ನೀಡುವ ಮೂಲಕ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿಪರ ಚಿಂತನೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಹಾಗೂ ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್ ಉಪಸ್ಥಿತರಿದ್ದರು.










