ಮಡಿಕೇರಿ ಮಾ.16 NEWS DESK : ಭಾರತ ಚುನಾವಣಾ ಆಯೋಗವು ಮಾ.16ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಮಾ.16ರಿಂದಲೇ ಕೊಡಗು ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಾ.28ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏ.4 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, ಏ.26ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.NEWS DESK
2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡತಡೆಗಳಾಗದಂತೆ ಎಲ್ಲರೂ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಜಿಲ್ಲೆಯ ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಮೈಸೂರು-ಕೊಡಗು ಕ್ಷೇತ್ರದ ಚುನಾವಣೆ ಏ.26 ರಂದು ನಡೆಯಲಿದೆ. ಕೊಡಗು ಜಿಲ್ಲಾ ವ್ಯಾಪ್ತಿಯ 4,66,154 ಮಂದಿ ಮತದಾನದ ಹಕ್ಕನ್ನು ಹೊಂದಿರುವುದಾಗಿ ತಿಳಿಸಿದರು.NEWS DESK
208-ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 2,36,562 ಮತದಾರರಿದ್ದು, 209- ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ 2,29,593 ಮಂದಿ ಮತದಾರರಿದ್ದಾರೆ. ಒಟ್ಟಾಗಿ ಜಿಲ್ಲೆಯಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯಲ್ಲಿ ವಿಶೇಷ ಚೇತನ ಮತದಾರರು 5686 ಹಾಗೂ ಯುವ ಮತದಾರರು 9076 ಮಂದಿ ಇದ್ದಾರೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 273 ಮತಗಟ್ಟೆಗಳಂತೆ ಒಟ್ಟು 546 ಮತಗಟ್ಟ್ಟೆಗಳನ್ನು ಮತದಾನಕ್ಕಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.NEWS DESK
ಕೊಡಗು ಜಿಲ್ಲೆಯ ಚುನಾವಣೆಗಾಗಿ ಹೈದರಾಬಾದ್‌ನಿಂದ 1,002 ಬ್ಯಾಲೆಟ್ ಯೂನಿಟ್, 763 ಕಂಟ್ರೋಲ್ ಯೂನಿಟ್ ಮತ್ತು 845 ವಿವಿ ಪ್ಯಾಟ್‌ಗಳನ್ನು ಪೂರೈಸಲಾಗಿದೆಯೆಂದು ತಿಳಿಸಿದರು.
ಚುನಾವಣೆಯ ಅಕ್ರಮಗಳ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಬಗ್ಗೆ, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಮತ್ತು ಮಾಹಿತಿಯನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ. ವೋಟರ್ ಸಹಾಯವಾಣಿಯು 24*7 ಕಾರ್ಯನಿರ್ವಹಿಸಲಿದೆ ಎಂದರು.NEWS DESK
ಅAಚೆಮತಪತ್ರ- 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನ , ಕೋವಿಡ್ ಶಂಕಿತ, ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಲಾಖೆಗಳ ಕಾರ್ಯನಿರತ ಅಧಿಕಾರಿ ಯಾ ಸಿಬ್ಬಂದಿಗಳಿಗೆ ವಿಶೇಷವಾಗಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಂಚೆ ಮತಪತ್ರಕ್ಕೆ ನಮೂನೆ 12 ಡಿಯಲ್ಲಿ ಈ ದಿನದಿಂದ ನಾಮಪತ್ರ ಸಲ್ಲಿಸಲು ಪ್ರಾರಂಭವಾದ ದಿನಾಂಕದಿಂದ 5 ದಿನದ ಒಳಗಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.NEWS DESK
ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಮಡಿಕೇರಿ ಕ್ಷೆತ್ರದಲ್ಲಿ ಸಹಾಯಕ ಚುನಾವಣಾಧಿಕಾರಿಗಳಾಗಿ ಉಪ ವಿಭಾಗಾಧಿಕಾರಿಗಳಾದ ವಿನಾಯಕ್ ನರ್ವಡೆ, ವಿರಾಜಪೇಟೆ ಕ್ಷೇತ್ರದಲ್ಲಿ ಉಪನಿದೇಶಕರಾದ ಎಲ್.ನಾರಾಯಣ ಸ್ವಾಮಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.NEWS DESK ::: ಕೋವಿ ಠೇವಣಿ :::
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಜಮ್ಮ ಹಿಡುವಳಿದಾರರು ಕೋವಿಯನ್ನು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಬೇಕಾಗಿಲ್ಲ. ಒಂದೊಮ್ಮೆ 5 ವರ್ಷ ಕ್ರಿಮಿನಲ್ ಪ್ರಕರಣದಲ್ಲಿ ಜೈಲುವಾಸ ಸೇರಿದ್ದರೆ ಕೋವಿಯನ್ನು ಸಮೀಪದ ಠಾಣೆಗೆ ಠೇವಣಿ ಇಡಬೇಕು. ಲೈಸನ್ಸ್ ಹೊಂದಿರುವವರು ಕೋವಿಯನ್ನು ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ಠೇವಣಿ ಇಡಬೇಕು. ಒಂದೊಮ್ಮೆ ಕಾಡುಪ್ರಾಣಿಗಳ ಉಪಟಳ ಮತ್ತಿತರ ಅತ್ಯವಶ್ಯಕ ಕಾರಣಕ್ಕಾಗಿ ಕೋವಿಯ ಅವಶ್ಯಕತೆ ಇದ್ದರೆ ಪೊಲೀಸ್ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಮಾಹಿತಿಗಳನ್ನು ನೀಡಿ ಅನುಮತಿಯನ್ನು ಪಡೆದುಕೊಳ್ಳಬಹುದಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಗಡಿ ಭಾಗದಲ್ಲಿ ಜಿಲ್ಲೆಗೆ ಬರುವ ಎಲ್ಲಾ ವಾಹನಗಳ ತಪಾಸಣಾ ದಿನದ 24 ಗಂಟೆ ನಡೆಸಲಾಗುವುದು. ದಾಖಲಾತಿ ಇಲ್ಲದ ಹಣ ಮತ್ತು ವಸ್ತುಗಳನ್ನು ಸಾಗಿಸುವಂತಿಲ್ಲ ಒಟ್ಟಿನಲ್ಲಿ ಶಾಂತಿಯುತ ಚುನಾವಣೆ ನಡೆಸಲು ಸಕಲ ಕ್ರಮ ಕೈಗೊಳ್ಳಲಾಗುವುದು ಎಂದರು.NEWS DESK
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಡೆ ಉಪಸ್ಥಿತರಿದ್ದರು.










