ಬೆಂಗಳೂರು ಮಾ.16 NEWS DESK : ಕಾರೊಂದು ಫ್ಲೈಓವರ್ನಿಂದ ಕೆಳಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ರಾಮನಗರ ತಾಲ್ಲೂಕಿನ ಕೆಂಪೇಗೌಡನ ದೊಡ್ಡಿ ಬಳಿ ನಡೆದಿದೆ. ಮದ್ದೂರು ತಾಲೂಕಿನ ಕಸ್ತೂರು ಗ್ರಾಮದ ನಿವಾಸಿ ಅಭಿಷೇಕ್ ಮೃತ ದುರ್ದೈವಿಯಾಗಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯಿಂದ ಅಂಡರ್ ಪಾಸ್ ಒಳಗಡೆ ಬಿದ್ದಿದೆ. ಅಪಘಾತದ ತೀವ್ರಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.










