ಮಡಿಕೇರಿ ಮಾ.17 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.NEWS DESK
ಪಿರಿಯಾಪಟ್ಟಣ ತಾಲ್ಲೂಕು ದೊಡ್ಡಹೊಸೂರು ಗ್ರಾಮದ ನಿವಾಸಿ ಬಸವರಾಜು(37) ಬಂಧಿತ ಆರೋಪಿಯಾಗಿದ್ದು, 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಮನೆಯ ಶೌಚಾಲಯದ ಹಿಂಭಾಗದಲ್ಲಿ ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ “ಕಾಪರ್” ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ.NEWS DESK
ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಪಿಎಸ್‌ಐ ಮೋಹನ್ ರಾಜು.ಪಿ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.NEWS DESK
ಶ್ವಾನ ಕಾಪರ್, ಕಾಪರ್ ನ ತರಬೇತುದಾರರಾದ ಮನಮೋಹನ್.ಬಿ.ಪಿ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.NEWS DESK
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*