ಸೋಮವಾರಪೇಟೆ ಮಾ.17 NEWS DESK : ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವೆಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು. ಮಠದ ಆವರಣದಲ್ಲಿ ನಡೆದ ಕೊಡಗು ಮತ್ತು ಹಾಸನ ಮಠಾಧೀಶರ ಪರಿಷತ್ತಿನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇವತ್ತಿನ ಸನ್ನಿವೇಶದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ವಿಶ್ವಾಸ ಎನ್ನುವುದು ಅನಿವಾರ್ಯವಾಗಿದೆ. ಜನಸಾಮಾನ್ಯರು ಹಾಗೂ ಮಠ ಮಾನ್ಯಗಳ ನಡುವೆ ಉತ್ತಮ ಸಂಬಂಧ, ಸಾಮರಸ್ಯವಿದ್ದರೆ ಸಮಾಜ ನೆಮ್ಮದಿಯಿಂದ ಉತ್ತಮವಾಗಿರುತ್ತದೆ ಎಂದರು. ಹಿಂದಿನ ಕಾಲದಿಂದಲೂ ಸಮಾಜಕ್ಕೆ ವೀರಶೈವ ಲಿಂಗಾಯತ ಮಠಗಳ ಕೊಡುಗೆ ಬಹಳಷ್ಟಿದೆ, ಇದು ಮುಂದುವರೆಯಬೇಕು. ಇಂದು ಹಲವು ಮಠಗಳು, ಸ್ವಾಮೀಜಿಗಳು ಸಂಕಷ್ಟದಲ್ಲಿದ್ದಾರೆ. ಅದಕ್ಕಾಗಿ ಎಲ್ಲಾ ಮಠಾಧೀಶರು ಸಂಘಟಿತರಾಗಬೇಕು, ಪರಸ್ಪರ ಸೌಹಾರ್ಧತೆಯಿಂದ ಇರಬೇಕು. ಆ ಮೂಲಕ ಮಠಗಳ ಆಸ್ತಿಗಳನ್ನು ರಕ್ಷಿಸಿಕೊಂಡು ಹೋಗಬೇಕು ಎಂದರು. ಸಭೆಯಲ್ಲಿ ಕೊಡಗು, ಹಾಸನ ಮಠದೀಶರ ಪರಿಷತ್ತು ರಚನೆ ಸಂಬಂಧ ಸುದೀರ್ಘ ಚರ್ಚೆ ನಡೆದು ಕೊಡಗು, ಹಾಸನ ವೀರಶೈವ ಲಿಂಗಾಯತ ಮಠಾದೀಶರ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಗೌರವಾದ್ಯಕ್ಷರಾಗಿ ಕೋಡಿಮಠದ ಸ್ವಾಮೀಜಿ, ಅಧಕ್ಷರಾಗಿ ಅರಕಲಗೂಡು ದೊಡ್ಡ ಮಠದ ಶ್ರೀಮಲ್ಲಿಕಾರ್ಜುನ ಸ್ವಾಮಿ, ಉಪಾಧ್ಯಕ್ಷರಾಗಿ ವಿರಾಜಪೇಟೆ, ಅರಮೇರಿ ಕಳಂಚೇರಿ ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿ, ಯಳನಾಡು ಮೂರು ಕಳಸ ಮಠದ ಶ್ರೀ ಜ್ಞಾನಪ್ರಭು ಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರಸಂತೆ ಮುದ್ದಿನ ಕಟ್ಟೆ ಮಠದ ಶ್ರೀಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿಗಳಾಗಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಹಾಸನ ತನ್ನಿರುಹಳ್ಳ ಮಠದ ಶ್ರೀ.ವಿಜಯಕುಮಾರ ಸ್ವಾಮೀಜಿ, ಖಜಾಂಚಿಯಾಗಿ ಅರಕಲಗೂಡು ಚಿಲುಮೆ ಮಠದ ಜಯದೇವ ಸಾಮೀಜಿ ಆಯ್ಕೆಯಾದರು. ಉಳಿದಂತೆ ಎರಡು ಜಿಲ್ಲೆಯ ಎಲ್ಲಾ ಸ್ವಾಮೀಜಿಗಳನ್ನು ನಿರ್ದೇಶಕರುಗಳನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೊಡಗು, ಹಾಸನ ಜಿಲ್ಲೆಯ ವಿವಿಧ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*