ಮಡಿಕೇರಿ ಮಾ.17 NEWS DESK : ಇದೇ ಮಾ.25 ರಿಂದ ಆರಂಭವಾಗಲಿರುವ 10ನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಎದುರಿಸಲು ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬೆಳೆಸಿ ಆತ್ಮಸ್ಥೈರ್ಯ ತುಂಬಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಸಿದ್ಧತೆ ಕುರಿತು ಕುಶಾಲನಗರದ ಫಾತಿಮ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯ ಬಗ್ಗೆ ಭೀತಿ ಮೂಡಿಸದೆ ಆತ್ಮವಿಶ್ವಾಸ ಬೆಳೆಸಬೇಕು ಎಂದರು.
ಜಿಲ್ಲೆಯಲ್ಲಿ 10ನೇ ತರಗತಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲಾ ಪ್ರೌಢಶಾಲೆಗಳಲ್ಲಿ ಮಕ್ಕಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದು ಭಾಗ್ಯಮ್ಮ ಹೇಳಿದರು.
ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯದಲ್ಲೇ 9 ನೇ ಸ್ಥಾನದ ಹೆಗ್ಗಳಿಕೆ ಪಡೆದಿತ್ತು. ಪ್ರಸ್ತುತ ವರ್ಷದಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಗಳಿಕೆಗೆ ಹೆಚ್ಚಿನ ಶ್ರಮ ವಹಿಸಲಾಗಿದೆ. ನಮ್ಮ ಜಿಲ್ಲೆಯು ಈ ಬಾರಿ 5 ರ ಸ್ಥಾನದ ಒಳಗೆ ಬರಲು ಪ್ರಯತ್ನ ನಡೆದಿದೆ ಎಂದು ತಿಳಿಸಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಫಲಿತಾಂಶ ಗಳಿಕೆಗೆ ಎಲ್ಲಾ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಹೆಚ್ಚಿನ ಶ್ರಮ ವಹಿಸುತ್ತಿದ್ದು, ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.
ತಾಲ್ಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಕಾಳನಾಯಕ್ ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ಒತ್ತಡ ನೀಡದೇ ಅವರಲ್ಲಿ ಪರೀಕ್ಷೆಯ ಕುರಿತು ಪ್ರೇರೇಪಣೆ ನೀಡಬೇಕು. ಹಾಗೆಯೇ, ಪರೀಕ್ಷೆಯ ಸಂದರ್ಭದಲ್ಲಿ ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸುವ ಕುರಿತು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎಂ.ಹೇಮಂತ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿವರಿಸಿದರು.
ತಾಲ್ಲೂಕು ನೋಡಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ, ಪರೀಕ್ಷಾ ಕೇಂದ್ರಗಳ ಕುರಿತು ಮಾಹಿತಿ ನೀಡಿದರು.
ಬಿಆರ್ ಪಿ ಎಸ್.ಎನ್.ಲೋಕೇಶ್, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್, ಫಾತಿಮ ಕಾನ್ವೆಂಟ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಸಾ ಆ್ಯನ್, ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*