ಮಡಿಕೇರಿ ಮಾ.18 NEWS DESK : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯು ಏ.3 ರಿಂದ ಏ.6ರ ವರೆಗೆ ನಡೆಯಲಿದೆ.
ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ.
ಏ.3 ರಂದು ಸಂಜೆ 6.30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಏ.4 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ, 10 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, 11 ಗಂಟೆಗೆ ಶ್ರೀ ನಾಗ ದೇವರಿಗೆ ತಂಬಿಲ ಸಮರ್ಪಣೆ, 11.30ಕ್ಕೆ ಕಲಶಾಭಿಷೇಕ, 12 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಜರುಗಲಿದೆ.
ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಲಿದ್ದು, 4.30ಕ್ಕೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು. 5.30ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 6.30ಕ್ಕೆ ಶ್ರೀ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ, 7.30ಕ್ಕೆ ಹರಕೆ ಕೋಲಗಳು ನೆರವೇರಲಿದೆ.
ಏ.5 ರಂದು ಸಂಜೆ 5.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಹೊರಟು ನಗರದ ಮುಖ್ಯ ಬೀದಿಗಳಲ್ಲಿ ಕಲಶ ಹಾಗೂ ತಾಲಾಪೆÇಲಿ ಆಕರ್ಷಕ ಚಂಡೆ ವಾದ್ಯ ಹಾಗೂ ಆಕರ್ಷಕ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಲಿದೆ.
ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, 4.30 ಗಂಟೆಗೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, 5.30 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ರಾತ್ರಿ 7 ಗಂಟೆಗೆ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, 8.40ಕ್ಕೆ ಅನ್ನಸಂತರ್ಪಣೆ ನೆರವೇರಲಿದೆ.
ರಾತ್ರಿ 7.30 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, 9.30 ಗಂಟೆಗೆ ಶ್ರೀ ಪೋದಿ ವೆಳ್ಳಾಟಂ, 10.30ಕ್ಕೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ರಾತ್ರಿ 12 ಗಂಟೆಗೆ ಶ್ರೀ ಶಿವಭೂತ ತೆರೆ, 1 ಗಂಟೆಗೆ ಶ್ರೀ ಗುಳಿಗ ದೇವರ ತೆರೆ, 2 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ, 2.30 ಗಂಟೆಗೆ ಶ್ರೀ ಕುಟ್ಟಿಚಾತನ್ ದೇವರ ತೆರೆ ಜರುಗಲಿದೆ.
ಏ.6 ರಂದು ಬೆಳಿಗ್ಗೆ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, ಬೆಳಿಗ್ಗೆ 5 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, 8 ಗಂಟೆಗೆ ಶ್ರೀ ಪೋದಿ ತೆರೆ, 9.30 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ 11.30ಕ್ಕೆ ಧ್ವಜ ಅವರೋಹಣ ನೆರವೇರಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ದೇವತಾಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಹಾಗೂ ಉತ್ಸವ ಸಮಿತಿ ಮನವಿ ಮಾಡಿದೆ.