ಮಡಿಕೇರಿ ಮಾ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿಯ ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ನ ಸಂಯುಕ್ತಾಶ್ರಯದಲ್ಲಿ ಮಾ.22 ರಂದು ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಚಾರ್ಯರಾದ ಆರ್.ಎಸ್.ರೇಣುಕಾ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಪಾಲ್ಗೊಳ್ಳಲಿದ್ದು, ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರುವರು.
80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಡಿಸೋಜ ಅವರ ಸಾಹಿತ್ಯದ ಕುರಿತು ಸೋಮವಾರಪೇಟೆಯ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ, ಸಾಹಿತಿ ಹಾಗೂ ಕಲಾವಿದೆ ಕೆ.ಮಿಲನ ಭರತ್ ಉಪನ್ಯಾಸ ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*