ವಿರಾಜಪೇಟೆ ಮಾ.18 NEWS DESK : ವಿರಾಜಪೇಟೆಯ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಪೆಗ್ಗರಿಕಾಡುವಿನಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನವೋದಯ ಯುವಕ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ಬಿಟ್ಟಂಗಾಲ ಗ್ರಾ.ಪಂ ಅಧ್ಯಕ್ಷ ಮೂಕಚಂಡ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಯುವ ಪೀಳಿಗೆಗೆ ಉತ್ತಮ ಸಂಸ್ಕೃತಿಯನ್ನು ಬೆಳೆಸುವಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದರು.
ನವೋದಯ ಯುವಕ ಸಂಘದ ಅಧ್ಯಕ್ಷ ಬಿ.ಎಮ್.ದಿನೇಶ್ ಮಾತನಾಡಿ, ಶಿವರಾತ್ರಿ ಪ್ರಾಮುಖ್ಯತೆಯನ್ನು ತಿಳಿಸಿದರು.
ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಪಿ.ಎನ್. ಶಾರದ ಮತ್ತು ನವೋದಯ ಯುವಕ ಸಂಘದ ಉಪಾಧ್ಯಕ್ಷ ಟಿ.ಪಿ ಸುಬ್ಬಯ್ಯ ಹಾಜರಿದ್ದರು. ಬಳಿಕ ವಿವಿಧ ಗ್ರಾಮೀಣ ಕ್ರೀಡಾಕೂಟಗಳು ನಡೆಯಿತು.









