ಮಡಿಕೇರಿ ಮಾ.19 NEWS DESK : ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವ ಮಾ.22ರಿಂದ ಮಾ.26ರವರೆಗೆ ನಡೆಯಲಿದೆ.
ಉತ್ಸವದ ಅಂಗವಾಗಿ ಮಾ.22ರಂದು ಬೆಳಗ್ಗೆ 10 ಗಂಟೆಯಿಂದ ಗಣಪತಿ ಹೋಮ, ಮಹಾಪೂಜೆ, ಸಂಜೆ 6 ಗಂಟೆಗೆ ಪ್ರಾರ್ಥನೆ, ತಕ್ಕರ ಮನೆಯಿಂದ ಭಂಡಾರ ತೆಗೆದುಕೊಂಡು ಬರುವುದು, ಅಂದಿಬೆಳಕು, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಮಾ.23ರಂದು ಬೆಳಗ್ಗೆ 6 ಗಂಟೆ ದೇವರು ಬಲಿ ಬರುವುದು, ಮಹಾಪೂಜೆ. ಸಂಜೆ 6 ಗಂಟೆಗೆ ದೇವರು ಬಲಿಬರುವುದು, ಅಂದಿಬೆಳಕು, ಮಹಾಪೂಜೆ, ನಂತರ ಶ್ರೀ ಪರದೇವರ ಕೋಟದಲ್ಲಿ ಕೊಟ್ಟಿಪಾಡುವುದು ಕಾರ್ಯಕ್ರಮಗಳು ಜರುಗಲಿದೆ.
ಮಾ.24ರಂದು ಬೆಳಿಗ್ಗೆ 6ಗಂಟೆಗೆ ದೇವರು ಬಲಿ ಬರುವುದು, ಅಯ್ಯಪ್ಪ ದೇವರ ಪೂಜೆ, ಮಹಾಪೂಜೆ, ಸಂಜೆ 6 ಗಂಟೆಗೆ ಬೆಳಕು, ದೇವರು ಬಲಿ ಬರುವುದು, ಅಂದಿಬೆಳಕು, ಪ್ರಸಾದ ವಿತರಣೆ ನಡೆಯಲಿದೆ. ಮಾ.25ರಂದು ಪಟ್ಟಣಿ, ಬೆಳಿಗ್ಗೆ 6 ಗಂಟೆಗೆ ಶ್ರೀ ದೇವರ ನೃತ್ಯ ಬಲಿ, ಶ್ರೀ ಪರದೇವರ ಮುಡಿ ತರುವುದು, ಶ್ರೀ ಅಯ್ಯಪ್ಪ ದೇವರ ಭಂಡಾರ ತರುವುದು, ಶ್ರೀ ಕುಟ್ಟಿಚಾತ ದೇವರ ಎಡೆಮಡಗುವುದು, ಎತ್ತು ಪೋರಾಟ, ಹಬ್ಬದ ಕಟ್ಟು ಮುರಿಯುದು, ತೆಂಗೆಪೋರು, ಮಹಾಪೂಜೆ, ಅನ್ನ ಸಂತರ್ಪಣೆ, ಶ್ರೀ ದೇವರ ನೆರಪು ಬಲಿ, ಶ್ರೀ ಪರದೇವರ, ಅಯ್ಯಪ್ಪ ದೇವರ, ಕುಟ್ಟಿ ಚಾತ ದೇವರ ಕೋಲ ನಡೆಯಲಿದೆ.
ಮಾ.26ರ ಸಂಜೆ 4 ಗಂಟೆಗೆ ಬೆಳಕು, ಶ್ರೀ ದೇವರ ಬಲಿ, ದೇವರ ಜಳಕ, ಮೆಟ್ಟಿಲು ಪೂಜೆ, ನೃತ್ಯ ಬಲಿ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*