ಸೋಮವಾರಪೇಟೆ ಮಾ.20 NEWS DESK : ಮಹದೇಶ್ವರ ಬ್ಲಾಕ್ ರಸ್ತೆಯಲ್ಲಿರುವ ಅಬಕಾರಿ ಇಲಾಖೆಯ ಮುಂಭಾಗ ರಸ್ತೆ ಬದಿ ನಿಲ್ಲಿಸಿರುವ ವಾಹನ ಹಾಗೂ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ರಸ್ತೆ ಬದಿಯಲ್ಲಿ ಹಾಕಿರುವ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ನಗರ ಘಟಕ ಆಗ್ರಹಿಸಿದೆ.
ಈ ಬಗ್ಗೆ ಪಟ್ಟಣ ಪಂಚಾಯಿತಿ ಮತ್ತು ಅಬಕಾರಿ ಇಲಾಖಾ ಕಚೇರಿಗೆ ಮನವಿ ಸಲ್ಲಿಸಿರುವ ಕಾರ್ಯಕರ್ತರು, ತಕ್ಷಣವೇ ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಕರವೇ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಮಡಿಕೇರಿ ರಸ್ತೆಯಲ್ಲಿರುವ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಕಟ್ಟಡಗಳನ್ನು ಒಡೆದ ಕಲ್ಲು, ಮಣ್ಣು ಗಾರೆ, ಇಟ್ಟಿಗೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಸುರಿಯಲಾಗಿದೆ. ಅಂತೆಯೇ ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ವಾಹನವನ್ನು ಕಚೇರಿ ಮುಂಭಾಗದ ರಸ್ತೆ ಬದಿಯಲ್ಲಿ ನಿಲುಗಡೆಗೊಳಿಸಿದ್ದು, ಇದರಿಂದಾಗಿ ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಿದೆ ಎಂದರು.
ತಕ್ಷಣ ಈ ಬಗ್ಗೆ ಗಮನ ಹರಿಸಿ ತ್ಯಾಜ್ಯ-ವಾಹನಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಕರವೇ ವತಿಯಿಂದ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭ ಕರವೇ ನಗರ ಘಟಕದ ಕಾರ್ಯದರ್ಶಿ ಕೆ.ಪಿ.ರವೀಶ್, ಸಹ ಕಾರ್ಯದರ್ಶಿ ಮಹಮ್ಮದ್ ಶಫಿ, ಗೌರವಾಧ್ಯಕ್ಷ ದೇವೇಂದ್ರ, ಸಲಹೆಗಾರ ದೇವರಾಜು ಸೇರಿದಂತೆ ಶೇಖರ್, ವೆಂಕಟೇಶ, ಲತ, ಸಿಮ್ರಾನ್ ಬಾನು, ಗಣೇಶ್, ಇಬ್ರಾಹಿಂ, ರವಿ, ಮಣಿ, ಅಜಯ್, ಸೀಮಂತ್ ಸೇರಿದಂತೆ ಇತರರು ಇದ್ದರು.
Breaking News
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*