ಮಡಿಕೇರಿ ಮಾ.20 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವವು ಮಾ.28 ರಿಂದ 31ರ ವರೆಗೆ ನಡೆಯಲಿದೆ.
ಶಾಲಾ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮವು ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಬಿದ್ದಂಡ ಎ.ನಂಜಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡವ ಸಮಾಜದ ಉಪಾಧ್ಯಕ್ಷರು ಮತ್ತು ಜಿಟಿಪಿಎಸ್ ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ ವಹಿಸಲಿದ್ದಾರೆ.
ಮಾ.30 ರಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಮೈಸೂರಿನ ಎಸ್‍ಬಿಆರ್‍ಆರ್ ಮಹಾಜನ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರಾದ ಹರೀಶ್ ಕೊಡಂದೇರ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಜಿಟಿಪಿಎಸ್ ಕರೆಸ್ಪೊಡೆಂಟ್ ಕನ್ನಂಡ ಕವಿತಾ ಬೊಳ್ಳಪ್ಪ ವಹಿಸಲಿದ್ದಾರೆ.
ಮಾ.31 ರಂದು 2.30 ಗಂಟೆಗೆ ಕೊಡವ ಸಮಾಜ ಮತ್ತು ಜಿಟಿಪಿಎಸ್ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಮೇರಿಯಂಡ ನಾಣಯ್ಯ, ಕಾಫಿ ಬೆಳೆಗಾರ ಹಾಗೂ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ ಪಾಲ್ಗೊಳ್ಳಲಿದ್ದಾರೆ.