ಮಡಿಕೇರಿ ಮಾ.21 NEWS DESK : ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ.
ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊAಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣವಿದೆ. ಮಡಿಕೇರಿಯಿಂದ ಚೆಟ್ಟಳ್ಳಿ ಮೂಲಕ ದುಬಾರೆಗೆ ಪ್ರವಾಸಿಗರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.










