ಸುಂಟಿಕೊಪ್ಪ,ಮಾ.22 NEWS DESK : ಬಿಜೆಪಿ ಪರಿಶಿಷ್ಟ ಮೋರ್ಚಾದ ಸಭೆಯು ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅವರ ಅಧ್ಯಕ್ಷತೆಯಲ್ಲಿ ಸುಂಟಿಕೊಪ್ಪದಲ್ಲಿ ನಡೆಯಿತು.
ದ್ವಾರಕಾ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಒಂದೂವರೆ ಲಕ್ಷಕ್ಕಿಂತಲ್ಲೂ ಅಧಿಕವಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ ಮೋರ್ಚದ ಘಟಕವನ್ನು ಬಲಿಷ್ಟಗೊಳಿಸುವ ಮೂಲಕ ಪರಿಶಿಷ್ಟ ಜನಾಂಗದವರು ರಾಜಕೀಯವಾಗಿ ಬೆಳೆಯುವಂತಾಗಬೇಕೆಂದು ಕರೆ ನೀಡಿದರು.
ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದವರನ್ನು ಪಕ್ಷವು ಗುರುತಿಸಿ ಉನ್ನತ ಸ್ಥಾನಮಾನ ನೀಡುತ್ತ ಬಂದಿದೆ. ಪಕ್ಷದ ಸಂಘಟನೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತಾಗಬೇಕೆಂದರು.
ಭಾರತೀಯ ಜನತಾ ಪಕ್ಷವು ರಾಷ್ಟ್ರ ಭಕ್ತಿ, ರಾಷ್ಟ್ರೀಯತೆಯ ಬಗ್ಗೆ ಅಪಾರವಾದ ಗೌರವವನ್ನು ನೀಡುವ ಪಕ್ಷವಾಗಿದೆ ಎಂದರು.
ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನೀಲ್‍ಕುಮಾರ್, ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಸೋಮವಾರಪೇಟೆ ಗ್ರಾಮಾಂತರ ಮಂಡಲ ಎಸ್ಸಿ ಮೋರ್ಚದ ಅಧ್ಯಕ್ಷ ಜಿ.ಜಗನಾಥ್, ಪಕ್ಷದ ಹಿರಿಯ ಸದಸ್ಯ ಬಿ.ಕೆ.ಮೋಹನ ಮಾತನಾಡಿದರು.
ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಪ್ರಧಾನ ಕಾರ್ಯದರ್ಶಿ ವಿ.ರಾಜ, ಕಾರ್ಯದರ್ಶಿ ಪ್ರಶಾಂತ್(ಕೋಕಾ), ಪಂಚಾಯಿತಿ ಸದಸ್ಯರಾದಆನಂದ, ಪ್ರೇಮ ಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ ಚಂದ್ರು ಹಾಜರಿದ್ದರು.
ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಪಿ.ಬಿ.ಮಂಜು ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಅವರನ್ನು ಆಯ್ಕೆ ಮಾಡಲಾಯಿತು.
Breaking News
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*