ಮಡಿಕೇರಿ ಮಾ.22 NEWS DESK : ನದಿ ಜಲಮೂಲಗಳ ಅಸ್ತಿತ್ವವನ್ನು ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.
ವಿಶ್ವಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ತಂಡಗಳ ಸಹಯೋಗದೊಂದಿಗೆ ನಡೆದ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸಕ್ತ ದಿನಗಳಲ್ಲಿ ಹಲವು ಕಾರಣಗಳಿಂದ ಕೆರೆಗಳ ನಾಶ ಉಂಟಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಮೂಲಕ ತಮ್ಮನ್ನು ಸಮಾಜದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಚುನಾವಣೆ ಪ್ರಕ್ರಿಯೆ ನಂತರ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
ಈ ಸಂದರ್ಭ ಮಾತನಾಡಿದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ .ಸತೀಶ್ ಕುಮಾರ್, ಜಲ ದಿನಾಚರಣೆಯ ಬಗ್ಗೆ ಹಾಗೂ ನೀರಿನ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ತಾವರೆಕೆರೆ ಸುತ್ತಮುತ್ತ ಬೆಳೆದು ನಿಂತಿದ್ದ ಪೊದೆ ಕುರುಚಲು ಗಿಡಗಳನ್ನು ಹಾಗೂ ತ್ಯಾಜ್ಯಗಳನ್ನು ತೆರವುಗೊಳಿಸುವ ಶ್ರಮದಾನ ನಡೆಯಿತು.
ಸಮೀಪದ ವಾಣಿಜ್ಯ ಕಟ್ಟಡಗಳಿಂದ ಕೆರೆಗೆ ನೇರವಾಗಿ ಹರಿಯುತ್ತಿದ್ದ ಕಲುಷಿತ ನೀರಿನ ತಡೆಗೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಲಿಖಿತ, ಆಡಳಿತ ಅಧಿಕಾರಿ ಮಹೇಶ್, ಎನ್ ಎಸ್ ಎಸ್ ಅಧಿಕಾರಿ ಮಂಜೇಶ್, ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಶ್ರೀನಾಥ್, ಪುರಸಭೆಯ ಆರೋಗ್ಯ ಅಧಿಕಾರಿ ಉದಯಕುಮಾರ್, ದಫೆದಾರ್ ಮೋಹನ್ ಕುಮಾರ್, ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖರಾದ ಚಂದ್ರಮೋಹನ್ ಮಂಡೆಪಂಡ ಬೋಸ್ ಮೊಣ್ಣಪ್ಪ, ಕೊಡಗನ ಹರ್ಷ ,ಡಿ ಆರ್ ಸೋಮಶೇಖರ್, ವನಿತಾ ಚಂದ್ರಮೋಹನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪೂರ್ಣಿಮಾ, ಶೌರ್ಯ ತಂಡದ ಕಾರ್ಯಕರ್ತರು, ಕಾಲೇಜುಗಳ ಎನ್‍ಎಸ್‍ಎಸ್ ವಿದ್ಯಾರ್ಥಿಗಳ ತಂಡ ಕೆರೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*