ಮಡಿಕೇರಿ ಮಾ.22 NEWS DESK : ಕೇರಳ ಮಾನಂದವಾಡಿಯಿಂದ ಕರ್ನಾಟಕದ ಕಡೆಗೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5ಲಕ್ಷ ರೂ.ಗಳನ್ನು ಕುಟ್ಟ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೊಡಗು-ಮೈಸೂರು ಗಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಗಳು ಕೇರಳದ ಕಡೆಯಿಂದ ಬಂದ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕೇರಳ ವೈನಾಡು ಜಿಲ್ಲೆಯ ಮಾನಂದವಾಡಿ ನಿವಾಸಿ ನಾಸಿರ್(58) ಎಂಬುವವರು ಯಾವುದೇ ದಾಖಲೆಗಳಿಲ್ಲದೆ ಒಟ್ಟು 5 ಲಕ್ಷ ರೂ.ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಕಾರಿನಲ್ಲಿದ್ದ ನಾಸಿರ್ ಅವರು ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನೀಡದಿರುವ ಹಿನ್ನೆಲೆ ಚುನಾವಣಾಧಿಕಾರಿಗಳು 5ಲಕ್ಷ ರೂ.ಗಳನ್ನು ವಶಕ್ಕೆ ಪಡೆದರು. ಬಳಿಕ ಮುಂದಿನ ಕ್ರಮಕ್ಕಾಗಿ ಹಣವನ್ನು ಸ್ಕ್ರೀನಿಂಗ್ ಕಮಿಟಿಗೆ ಹಸ್ತಾಂತರಿಸಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನವೀನ್, ಕುಟ್ಟ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಫ್ರಾನ್ಸಿಸ್, ಸಿಬ್ಬಂದಿಗಳಾದ ಮೋಹನ್ ಕುಮಾರ್, ಮಂಜು, ಅಬಕಾರಿ ಇಲಾಖೆ ಉಪನಿರೀಕ್ಷಕ ವಿ.ಸುರೇಂದ್ರ, ಶಿಕ್ಷಕ ಧರ್ಮಲಿಂಗ ಅವರುಗಳ ತಂಡ ಕಾರ್ಯಾಚರಣೆ ನಡೆಸಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*