ಮಡಿಕೇರಿ ಮಾ.22 NEWS DESK : ಚುನಾವಣೆಯಲ್ಲಿ ಅಭ್ಯರ್ಥಿಯ ಸಾಮರ್ಥ್ಯ ಆಧರಿಸಿ ಮತದಾರರು ಆಯ್ಕೆ ಮಾಡುತ್ತಾರೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ತಿಳಿಸಿದ್ದಾರೆ.
ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅಭ್ಯರ್ಥಿಯ ಸಾಮರ್ಥ್ಯ ಆಧರಿಸಿ ಜನ ಆಯ್ಕೆ ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಚಾರದ ಸಂದರ್ಭ ಜನರಿಂದ ಉತ್ತಮ ಸ್ಪಂದನೆ ಮತ್ತು ಉತ್ಸಾಹ ಕಂಡು ಬರುತ್ತಿದೆ. ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ಪ್ರಮುಖರು ಗಮನಕ್ಕೆ ತಂದಿದ್ದು, ಅದರ ಪರಿಹಾರಕ್ಕೂ ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಪ್ರಚಾರ ಅಭಿಯಾನಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಗೈರಾಗಿರುವ ಕುರಿತು ಪ್ರತಿಕ್ರಿಯಿಸಿದ ಯದುವೀರ್ ಒಡೆಯರ್, ಪ್ರಚಾರ ಅಭಿಯಾನ ನಡೆಸುವಂತೆ ಪಕ್ಷವೇ ಸೂಚನೆ ನೀಡಿದ್ದು, ಅದರಂತೆ ಪ್ರಚಾರ ಆರಂಭಿಸಲಾಗಿದೆ. ಪ್ರತಾಪ್ ಸಿಂಹ ಅವರು ಕೂಡ ಎಲ್ಲಾ ಸಹಕಾರ ನೀಡುವುದಾಗಿ ಈಗಾಗಲೇ ಹೇಳಿದ್ದಾರೆ. 10 ವರ್ಷಗಳ ಕಾಲ ಸಂಸದರಾಗಿ ಅವರು ಅಭಿವೃದ್ದಿ ಮಾಡುವ ಮೂಲಕ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದರು.
ಕಾವೇರಿ ಮಾತೆಯ ಪುಣ್ಯ ಭೂಮಿಯ ಸೇವೆಗೆ ಅವಕಾಶ ದೊರೆತದ್ದು ನನ್ನ ಸೌಭಾಗ್ಯ. ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರೊಂದಿಗೆ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ, ನಾಡು ಅಭಿವೃದ್ಧಿಯಾಗಲಿ ಎಂದು ಮಾತೆ ಕಾವೇರಿಯಲ್ಲಿ ಪ್ರಾರ್ಥಿಸಿದ್ದೇನೆ. ಮೈಸೂರು ಜಿಲ್ಲೆ ಕಾವೇರಿ ಮಾತೆಯನ್ನೂ ಆರಾಧಿಸುತ್ತದೆ. ಕಾವೇರಿ ಮಾತೆ ನಮಗೆ ತಾಯಿಯಾಗಿ ಧಾರ್ಮಿಕತೆಯೊಂದಿಗೆ ಆರ್ಥಿಕತೆಯ ನೆಲೆಯನ್ನೂ ನೀಡಿದೆ ಎಂದು ಯದುವೀರ್ ತಿಳಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಪಕ್ಷ ಪ್ರಮುಖರಾದ ಉಮಾಪ್ರಭು, ಹೊಸೂರು ಸತೀಶ್ ಜೋಯಪ್ಪ, ಬೆಪ್ಪುರನ ಮೇದಪ್ಪ, ತಳೂರು ಕಿಶೋರ್ ಕುಮಾರ್, ಸುಬ್ರಮಣ್ಯ ಉಪಧ್ಯಾಯ, ನಾಗೇಶ್ ಕುಂದಲ್ಪಾಡಿ, ಕಾಂಗೀರ ಸತೀಶ್, ಪಿ.ಡಿ.ಪೊನ್ನಪ್ಪ, ರಾಬಿನ್ ದೇವಯ್ಯ, ಉಮೇಶ್ ಸುಬ್ರಮಣಿ, ಡೀನ್ ಬೋಪಣ್ಣ, ಬಿ.ಪಿ.ಡಿಶು, ಕವನ್ ಕಾವೇರಪ್ಪ ಮತ್ತಿತ್ತರರು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*