ಸೋಮವಾರಪೇಟೆ ಮಾ.22 NEWS DESK : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಆಶ್ರಯದಲ್ಲಿ, ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಇಲ್ಲಿನ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಲ ಜೀವರಾಶಿಗಳಿಗೂ ಅತೀ ಅಗತ್ಯವಾಗಿರುವ ನೀರಿನ ಮಹತ್ವವನ್ನು ಎಲ್ಲರೂ ಅರಿತುಕೊಂಡು, ಅದರ ಸಂರಕ್ಷಣೆಗೆ ಪ್ರತಿಯೋರ್ವರೂ ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ವಕೀಲರಾದ ಹೆಚ್.ಎಸ್. ವೆಂಕಟೇಶ್ ಅವರು, ಜಲಮೂಲಗಳ ಸಂರಕ್ಷಣೆಯೊAದಿಗೆ, ಹಸಿರೀಕರಣಕ್ಕೆ ಆದ್ಯತೆ ನೀಡಬೇಕು. ದಿನಬಳಕೆಯಲ್ಲಿ ನೀರಿನ ಮಿತವ್ಯಯ ಮಾಡಬೇಕು. ನೀರಿನ ಪುನರ್ಬಳಕೆಗೆ ಹೆಚ್ಚು ಒತ್ತು ನೀಡಬೇಕು. ಹಸಿರು ಉಳಿದರೆ ಮಾತ್ರ ನೀರು, ನೀರಿದ್ದರೆ ಮಾತ್ರ ಜೀವನ ಎಂಬುದನ್ನು ಮರೆಯಬಾರದು ಎಂದರು.
ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ತಾಲೂಕು ತಹಶೀಲ್ದಾರ್ ನವೀನ್‌ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.










