ಮಡಿಕೇರಿ ಮಾ.23 NEWS DESK : ಲಾರಿ ಮತ್ತು ಆ್ಯಂಬುಲೆನ್ಸ್ ನಡುವೆ ಡಿಕ್ಕಿಯಾಗಿ ಓರ್ವ ಗಾಯಗೊಂಡಿರುವ ಘಟನೆ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ.
ಅಪಘಾತದಿಂದ ಗಾಯಗೊಂಡಿರುವ ಆ್ಯಂಬುಲೆನ್ಸ್ ಚಾಲಕನನ್ನು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಗ್ಗೆ ನಡೆದ ಪ್ರತ್ಯೇಕ ಅಪಘಾತದ ಗಾಯಾಳುವನ್ನು ಮೈಸೂರಿಗೆ ಕರೆದೊಯ್ಯುತ್ತಿದ್ದ ವಿರಾಜಪೇಟೆ ಸರಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಎದುರು ಭಾಗದಿಂದ ಬಂದ ಲಾರಿಗೆ ಡಿಕ್ಕಿ ಹೊಡೆಯಿತು ಎಂದು ಹೇಳಲಾಗಿದೆ. ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಲು ಲಾರಿ ಚಾಲಕ ಲಾರಿಯನ್ನು ತಕ್ಷಣ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಪಡಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಆ್ಯಂಬುಲೆನ್ಸ್ ಚಾಲಕ ಹೊರತು ಪಡಿಸಿ ಉಳಿದವರೆಲ್ಲರು ಅಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










