ಮಡಿಕೇರಿ ಮಾ.23 NEWS DESK : ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್ ಸರಕಾರದ ಜನಪ್ರಿಯ ಯೋಜನೆಗಳನ್ನು ಮುಂದಿಟ್ಟುಕೊಂಡು ಪಕ್ಷಕ್ಕಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶತಾಯಗತಾಯ ಶ್ರಮಿಸಬೇಕೆಂದು ಕರೆ ನೀಡಿದರು.
ಪಕ್ಷದ ನಾಯಕರುಗಳಾದ ವೀಣಾ ಅಚ್ಚಯ್ಯ, ಬ್ಲಾಕ್ ಅಧ್ಯಕ್ಷ ಹಂಸ, ಪಕ್ಷದ ಹಿರಿಯ ನಾಯಕ ಟಿ.ಪಿ.ರಮೇಶ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ.ಶಶಿಧರ್ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಒಂದಾಗಿ ಅಭ್ಯರ್ಥಿ ಎ0. ಲಕ್ಷ್ಮಣ ಅವರನ್ನು ಗೆಲ್ಲಿಸಲು ಪಣತೊಡಬೇಕೆಂದು ಕರೆ ನೀಡಿದರು.
ಸನ್ಮಾನ :: ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಧರ್ಮಜ ಉತ್ತಪ್ಪ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ದಾಸ್, ಫ್ಯಾನ್ಸಿ ಪಾರ್ವತಿ ಹಾಗೂ ಮಡಿಕೇರಿ ನಗರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಜುಲೆಕಾಬಿ, ಜೆ.ಸಿ.ಜಗದೀಶ್, ಮಂಡೀರ ಸದಾಮುದ್ದಪ್ಪ, ಯಾಕೂಬ್, ಮುದ್ದುರಾಜ್ ಅವರನ್ನು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸಭೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಬ್ಲಾಕ್ ಅಧ್ಯಕ್ಷ ಎಚ್.ಎ.ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಸದಸ್ಯರಾದ ಚುಮ್ಮಿ ದೇವಯ್ಯ, ಟಿ.ಆರ್.ಉದಯಕುಮಾರ್, ಎಂ.ಎ.ಜಫ್ರೂಲ , ಹಿರಿಯ ಕಾಂಗ್ರೆಸ್ ನಾಯಕ ಟಿ.ಎಂ.ಅಯ್ಯಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುನೀರ್ ಅಹಮದ್, ವಿ.ಪಿ.ಸುರೇಶ್, ಹಿರಿಯರಾದ ಚುಮ್ಮಣ್ಣ, ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷ ಸುರಯ್ಯ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್‌ನ ಅಧ್ಯಕ್ಷ ತೆನ್ನಿರ ಮೈನ, ಕಾರ್ಮಿಕ ಘಟಕದ ಅಧ್ಯಕ್ಷ ಕೆ.ಆರ್.ದಿನೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಮಾಜಿ ಸೈನಿಕರ ಘಟಕದ ಜಿಲ್ಲಾಧ್ಯಕ್ಷ ಗಣೇಶ್ ಬೊಳ್ಳಿಯಂಡ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಮಡಿಕೇರಿ ನಗರ ಕಾಂಗ್ರೆಸ್‌ನ ವಿವಿಧ ಘಟಕಗಳ ನಗರ ಅಧ್ಯಕ್ಷರುಗಳು ಮತ್ತು ಬೂತ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಹಾಜರಿದ್ದರು.
ಪಕ್ಷಕ್ಕೆ ಸೇರ್ಪಡೆ :: ಸಭೆಯಲ್ಲಿ ಯೂತ್ ಕಾಂಗ್ರೆಸ್ ನ ನಗರಧ್ಯಕ್ಷರಾದ ದರ್ಶನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ಸುಮಾರು 50ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಜನತದಳದ ಇಸಾಕ್ ಖಾನ್ ಅವರ ನೇತೃತ್ವದಲ್ಲಿ ನಗರ ಸಭಾ ಮಾಜಿ ಸದಸ್ಯ ಅಶ್ರಫ್, ಲೀಲಾ ಶೇಷಮ್ಮ ಹಾಗೂ ಸಂಗಡಿಗರು, ನಿವೃತ್ತ ಶಿಕ್ಷಕಿ ರೇವತಿ ರಮೇಶ್, ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಮೆಚ್ಚಿ ಶಾಸಕ ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರ ಅಧ್ಯಕ್ಷ ರಾಜೇಶ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.










