ಕುಶಾಲನಗರ ಮಾ.24 NEWS DESK : ಬಸ್ ನಲ್ಲಿ ಅಪಾಯಕಾರಿ ಪ್ರಯಾಣದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೋಡಿ ಅರಿವಿದ್ದರೂ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಬಸ್ ನ ಬಾಗಿಲು, ಮೆಟ್ಟಿಲುಗಳಲ್ಲಿ ನೇತಾಡಿಕೊಂಡು ಪ್ರಯಾಣ ಮಾಡುವ ದೃಶ್ಯಗಳು ಕಂಡು ಬರುತ್ತಿದೆ. ಕುಶಾಲನಗರ ಸಮೀಪದ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೆಲವು ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಇದನ್ನು ಗಮನಿಸಿದ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಶಾ ಅವರು ವಿದ್ಯಾರ್ಥಿಗಳನ್ನು ಬಸ್ ನಿಂದ ಕೆಳಗಿಳಿಸಿ ಬುದ್ದಿ ಮಾತು ಹೇಳಿದರು. ದಾರಿಯಲ್ಲಿ ಹೋಗುತ್ತಿದ್ದ ಖಾಸಗಿ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜ್ ಗೆ ಕಳುಹಿಸಿಕೊಡುವ ಮೂಲಕ ಅಪಾಯದ ಬಗ್ಗೆ ಅರಿವು ಮೂಡಿಸಿ ಮಾದರಿಯಾದರು. (ಕೃಪೆ : CM)










