ಮಡಿಕೇರಿ ಮಾ.24 NEWS DESK : ರಾಷ್ಟ್ರ ಮಟ್ಟದ ಪೊಲೀಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜಿಲ್ಲಾ ಶಸಸ್ತ್ರ ದಳದ ARSI ಜಿತೇಂದ್ರ ರೈ ಚಿನ್ನದ ಪದಕ ಪಡೆದಿದ್ದಾರೆ.
ಫುಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ತೆಲಂಗಾಣದಲ್ಲಿ ನಡೆದ ರಾಷ್ಟç ಮಟ್ಟದ ಪೊಲೀಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಜಿತೇಂದ್ರ ರೈ, ಡಬಲ್ಸ್ ನಲ್ಲಿ ಕಂಚಿನ ಪದಕ ಹಾಗೂ ಮಿಕ್ಸ್ ಡಬಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ಕೊಡಗು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ಈ ಹಿಂದೆಯೂ ರಾಷ್ಟç ಹಾಗೂ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅನೇಕ ಪದಕಗಳನ್ನು ಗೆದ್ದಿದ್ದಾರೆ.
ಸೇನಾಪಡೆ, ಭಾರತೀಯ ರೈಲ್ವೆ, ಅರೆಸೇನಾ ಪಡೆ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 28 ರಾಜ್ಯ ಹಾಗೂ ವಿವಿಧ ಘಟಕಗಳು ಈ ಕ್ರೀಡೆಯಲ್ಲಿ ಭಾಗವಹಿಸಿದ್ದವು. ಜಿತೇಂತ್ರ ರೈ ಸಾಧನೆಯನ್ನು ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.










