ಮೈಸೂರು ಮಾ.24 NEWS DESK : ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಜಿಲ್ಲೆಗಳ ಕಾಂಗ್ರೆಸ್ ಮುಖಂಡರುಗಳ ಸಭೆ ನಡೆಸಿದರು.
ಮೈಸೂರಿನಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ||ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮೈಸೂರು ಜಿಲ್ಲೆಯ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.












