ಮಡಿಕೇರಿ ಮಾ.25 NEWS DESK : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾ.27 ರಂದು ಮಡಿಕೇರಿಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ.
ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ವಿಜಯೇಂದ್ರ ಅವರನ್ನು ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಕುಶಾಲನಗರದ ಕೊಪ್ಪ ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.










