ಮಡಿಕೇರಿ ಮಾ.25 NEWS DESK : ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ ಸ್ವಾಮಿ ಸ್ಮರಣಾರ್ಥ ಏ.1 ರಿಂದ ಮೇ 2ರ ವರೆಗೆ ಮಡಿಕೇರಿಯಲ್ಲಿ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಕ್ಲಬ್‍ನ ಸಂಯೋಜಕ ಬೊಪ್ಪಂಡ ಶ್ಯಾಂ ಪೂಣಚ್ಚ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 30ನೇ ವರ್ಷದ ಉಚಿತ ಬೇಸಿಗೆ ಶಿಬಿರ ನಡೆಯಲಿದ್ದು, 6 ರಿಂದ 16 ವರ್ಷದ ಒಳಗಿನ ಬಾಲಕ-ಬಾಲಕಿಯರು ಪಾಲ್ಗೊಳ್ಳಬಹುದಾಗಿದೆ ಎಂದರು.
ಶಿಬಿರದಲ್ಲಿ ಹಾಕಿ, ಯೋಗ, ಪ್ರಾಣಾಯಾಮ ಹಾಗೂ ಅಥ್ಲೆಟಿಕ್ಸ್ ಸೇರಿದಂತೆ ನುರಿತು ತರಬೇತುದಾರರಿಂದ ಬೆಳಿಗ್ಗೆ 6.30 ಗಂಟೆಯಿಂದ ಬೆಳಿಗ್ಗೆ 8.30 ಗಂಟೆಯವರೆಗೆ ತರಬೇತಿ ನಡೆಯಲಿದೆ. ಆಸಕ್ತರು ನೋಂದಣಿಗಾಗಿ 9448895950, 9448873999 ನ್ನು ಸಂಪರ್ಕಿಸುವಂತೆ ತಿಳಿಸಿದರು.
ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳಿಗೆ ಉಚಿತವಾಗಿ, ಬ್ರೆಡ್, ಬಾಳೆಹಣ್ಣು, ಮೊಟ್ಟೆ, ಹಾಲು ನೀಡಲಾಗುತ್ತದೆ. ಅಲ್ಲದೆ ಶಿಬಿರದ ಕೊನೆಯ ದಿನ ಶಿಬಿರಾರ್ಥಿಗಳಿಗೆ ಚಾರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶ್ಯಾಂ ಪೂಣಚ್ಚ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್‍ನ ಕಾರ್ಯದರ್ಶಿ ಪಾರ್ಥ ಚಂಗಪ್ಪ, ಸಂಚಾಲಕ ಬಾಬು ಸೋಮಯ್ಯ ಹಾಗೂ ಪ್ರಬಂಧಕ ಕುಡೆಕಲ್ ಸಂತೋಷ್ ಉಪಸ್ಥಿತರಿದ್ದರು.









