ಮಡಿಕೇರಿ ಮಾ.25 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಪೊಲೀಸರ ಸಭೆ ಕೊಡಗು- ಕೇರಳ ಗಡಿಯ ಕರಿಕೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಮಡಿಕೇರಿ ಹಾಗೂ ಸುಳ್ಯ ತಾಲ್ಲೂಕಿನ ಪೊಲೀಸ್ ಅಧಿಕಾರಿಗಳು ಸುದೀರ್ಘ ಕಾಲ ಚರ್ಚಿಸಿ ಚುನಾವಣಾ ಕರ್ತವ್ಯದ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಗಡಿ ಪ್ರದೇಶಗಳಲ್ಲಿ ತಪಾಷಣೆ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದು, ಅಂತರ್ ಜಿಲ್ಲಾ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹ, ಚೆಕ್ ಪೋಸ್ಟ್ ಗಳಲ್ಲಿ ತನಿಖೆಯ ವಿಧಾನ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳಿಂದ ಕರ್ತವ್ಯಕ್ಕೆ ಸಂಬಂಧಿಸಿದಂತೆ ಪರಸ್ಪರ ಸಹಕಾರ ಪಡೆದುಕೊಳ್ಳುವುದು ಸೇರಿದಂತೆ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದರು. ಮಡಿಕೇರಿ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಳ್ಯ, ರಾಜಪುರಂ, ಭಾಗಮಂಡಲ, ನಾಪೋಕ್ಲು, ಮಡಿಕೇರಿ ಪೋಲಿಸ್ ಠಾಣೆಗಳ ಅಧಿಕಾರಿಗಳು ಭಾಗವಹಿಸಿದ್ದರು.










