ವಿರಾಜಪೇಟೆ ಮಾ.25 NEWS DESK : ವಿರಾಜಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಬಾಳುಗೋಡು ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲ ಡಾ.ದಿಲನ್ ಮುತ್ತಣ್ಣ ಅವರನ್ನು ನೇಮಕ ಮಾಡಲಾಗಿದೆ.
ತಾಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸಬೇಕು ಹಾಗೂ ಬಸವಾದಿ ಶರಣರ ಜೀವನ ಮೌಲ್ಯಗಳನ್ನು ಜನಮಾನಸದಲ್ಲಿ ಪರಿಚಯಿಸುವ ಮೂಲಕ ಅರಿವು ಮೂಡಿಸಬೇಕಿದೆ ಎಂದು ಶಸಾಪ ಕೊಡಗು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









