ವಿರಾಜಪೇಟೆ ಮಾ.25 NEWS DESK : ಬಾಡಗ ಪುದುಕೇರಿ ಮಹಾದೇವರ ದೇವಾಲಯದ ಜಾತ್ರಾ ಮಹೋತ್ಸವ ಅಂಗವಾಗಿ ದೇವಾಲಯದಲ್ಲಿ ಬಿಟ್ಟಂಗಾಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರುಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.
ದೇವಾಲಯದ ಆವರಣವನ್ನು ಶುಚಿಗೊಳಿಸಿ, ಸುತ್ತಮುತ್ತ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಿದರು.
ಈ ಸಂದರ್ಭ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಹಾಗೂ ಸದಸ್ಯರುಗಳಾದ ರೇಖಾ ಗಣೇಶ್, ಗೀತಾ, ರಂಜನ್ ಮೋಹನ್, ಅರುಣ್, ಕಿರಣ್, ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.









